ಇದೇ ತಿಂಗಳ 10ರ ನಂತರ ರಾಜ್ಯ ಸಚಿವ ಸಂಪುಟ ವಿಸ್ತರಣೆ

ಈ ಸುದ್ದಿಯನ್ನು ಶೇರ್ ಮಾಡಿ

Siddaramaiah-CM

ಬೆಂಗಳೂರು, ಮೇ 1-ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಇದೇ ತಿಂಗಳ 10ರ ನಂತರ ನಡೆಯುವ ಸಾಧ್ಯತೆ ಇದೆ. ಸಂಪುಟದಲ್ಲಿ ಖಾಲಿ ಇರುವ ಎರಡು ಸ್ಥಾನಗಳನ್ನು ಭರ್ತಿ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ತೀರ್ಮಾನಿಸಿದ್ದು, ಎರಡೂ ಸ್ಥಾನಗಳನ್ನು ಉತ್ತರ ಕರ್ನಾಟಕಕ್ಕೆ ನೀಡಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.  ಮಾಜಿ ಸಚಿವರಾದ ಎಸ್.ಆರ್.ಪಾಟೀಲ್ ಅವರನ್ನು ಮತ್ತೆ ಸಂಪುಟಕ್ಕೆ ತÉಗೆದುಕೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ. ಎಚ್.ವೈ.ಮೇಟಿ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಅದೇ ಸಮುದಾಯದವರೊಬ್ಬರನ್ನು ನೇಮಕ ಮಾಡಲು ನಿರ್ಧರಿಸಿದ್ದು, ಹೊಸದುರ್ಗದ ಶಾಸಕ ಗೋವಿಂದಪ್ಪ ಅವರ ಹೆಸರು ಕೇಳಿ ಬಂದಿದೆಯಾದರೂ ಮೇಟಿ ಅವರನ್ನೇ ಮತ್ತೆ ಸಂಪುಟಕ್ಕೆ ತೆಗೆದುಕೊಳ್ಳಬೇಕು ಎಂಬ ಒತ್ತಡವೂ ಕೇಳಿಬಂದಿದೆ.ಮೇಟಿಯವರನ್ನು ತೆಗೆದುಕೊಂಡರೆ ಉತ್ತರ ಕರ್ನಾಟಕ ಭಾಗದ ಇಬ್ಬರಿಗೆ ಅವಕಾಶ ನೀಡಿದಂತಾಗುತ್ತದೆ. ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡುವುದಾಗಿ ಭರವಸೆ ನೀಡಿ ಎಸ್.ಆರ್.ಪಾಟೀಲ್ ಅವರನ್ನು ಸಂಪುಟದಿಂದ ಕೈಬಿಡಲಾಗಿತ್ತು. ಈಗ ಆ ಸ್ಥಾನ ಅವರಿಗೇ ಸಿಗುವ ಸಾಧ್ಯತೆ ಕಡಿಮೆಯಾಗಿರುವುದರಿಂದ ಅವರನ್ನು ಮತ್ತೆ ಸಂಪುಟಕ್ಕೆ ತೆಗೆದುಕೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದ್ದು, ಹಳೇ ಮೈಸೂರು ಭಾಗದ ಲಿಂಗಾಯತ ಶಾಸಕರಿಗೆ ಸಂಪುಟದಲ್ಲಿ ಸ್ಥಾನ ಕೈತಪ್ಪುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.  ಒಟ್ಟಾರೆ ಸಂಪುಟ ವಿಸ್ತರಣೆಗೆ ಅಳೆದೂ ತೂಗಿ ಯೋಚನೆ ಮಾಡುತ್ತಿದ್ದಾರೆ. ಚುನಾವಣೆ ಸಮೀಪಿಸುತ್ತಿರುವುದರಿಂದ ವರ್ಷವಿರುವುದರಿಂದ ಸಂಪುಟ ವಿಸ್ತರಣೆ ಮಾಡಿದರೆ ಮತ್ತೆಲ್ಲಿ ಭಿನ್ನಮತ ಭುಗಿಲೆದ್ದು ತೊಂದರೆಯಾಗಬಹುದೆಂಬ ಭೀತಿಯೂ ಕೂಡ ಕಾಡುತ್ತಿದೆ.

ಅದಕ್ಕಾಗಿ ಸಾಕಷ್ಟು ದೂರಾಲೋಚನೆಯನ್ನು ಮುಖ್ಯಮಂತ್ರಿಗಳು ಮಾಡುತ್ತಿದ್ದಾರೆ. ಈಗ ಕಾಂಗ್ರೆಸ್‍ನಲ್ಲಿ ಉಸ್ತುವಾರಿ ಬದಲಾವಣೆ ಕೂಡ ಆಗಿದೆ. ದಿಗ್ವಿಜಯ್‍ಸಿಂಗ್ ಅವರ ಬದಲಾಗಿ ಕೆ.ಸಿ.ವೇಣುಗೋಪಾಲ್ ಅವರನ್ನು ನೇಮಕ ಮಾಡಲಾಗಿದೆ. ಇನ್ನು ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಈ ಎಲ್ಲಾ ತೀರ್ಮಾನಗಳನ್ನು ಕೈಗೊಳ್ಳಬೇಕಿದೆ. ಹಾಗಾಗಿ ಇನ್ನೂ ಸಂಪುಟ ವಿಸ್ತರಣೆ ಕೆಲ ಕಾಲ ಮುಂದೆ ಹೋಗುವ ಸಾಧ್ಯತೆ ಇದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin