ಅನಂತನಾಗ್ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ರದ್ದು

ಈ ಸುದ್ದಿಯನ್ನು ಶೇರ್ ಮಾಡಿ

Anantnag--01

ನವದೆಹಲಿ, ಮೇ 2-ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸಲು ಪರಿಸ್ಥಿತಿ ಅನುಕೂಲಕರವಾಗಿಲ್ಲ ಎಂಬ ಕಾರಣ ನೀಡಿ ಜಮ್ಮು ಮತ್ತು ಕಾಶ್ಮೀರದ ಶ್ರೀನಗರ ಲೋಕಸಭಾ ಕ್ಷೇತ್ರದ ಉಪಚುನಾವಣೆಯನ್ನು ಕೇಂದ್ರ ಚುನಾವಣಾ ಆಯೋಗ ರದ್ದುಗೊಳಿಸಿದೆ. ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟ ಹಿನ್ನೆಲೆಯಲ್ಲಿ ಏ.12ರಂದು ನಡೆಯಬೇಕಿದ್ದ ಉಪಚುನಾವಣೆಯನ್ನು ಮೇ 25ಕ್ಕೆ ಮುಂದೂಡಲಾಗಿತ್ತು. ಸಾಕಷ್ಟು ಸಂಖ್ಯೆಯ ಭದ್ರತಾ ಸಿಬ್ಬಂದಿ ಅಲಭ್ಯತೆಯು ಚುನಾವಣಾ ಪ್ರಕ್ರಿಯೆಯನ್ನು ಮುಂದೂಡಲು ಇನ್ನೊಂದು ಕಾರಣ ಎಂದು ಆಯೋಗವು ತಡರಾತ್ರಿ ನೀಡಿದ ಆದೇಶದಲ್ಲಿ ತಿಳಿಸಿದೆ. ಈ ಕುರಿತು 10 ಪುಟಗಳ ಆದೇಶ ಹೊರಡಿಸಿರುವ ಆಯೋಗ, ಚುನಾವಣೆಯ ಮುಂದಿನ ದಿನಾಂಕವನ್ನು ನಂತರ ತಿಳಿಸುವುದಾಗಿ ಹೇಳಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  Facebook Comments

Sri Raghav

Admin