ಇನ್ನು 15 ದಿನಗಳಲ್ಲಿ ರಿಯಲ್ ಎಸ್ಟೇಟ್ ಕಾಯ್ದೆ ಜಾರಿ : ನಿವೇಶನ, ಮನೆ ವ್ಯವಹಾರ ಪಾರದರ್ಶಕ

ಈ ಸುದ್ದಿಯನ್ನು ಶೇರ್ ಮಾಡಿ

Venkayya-Naidu--01

ಬೆಂಗಳೂರು, ಮೇ 2-ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ರಿಯಲ್ ಎಸ್ಟೇಟ್ ಕಾಯ್ದೆ ಹದಿನೈದು ದಿನದಲ್ಲಿ ಕರ್ನಾಟಕದಲ್ಲೂ ಜಾರಿಯಾಗಲಿದೆ ಎಂದು ಕೇಂದ್ರ ನಗರಾಭಿವೃದ್ಧಿ ಸಚಿವ ವೆಂಕಯ್ಯನಾಯ್ಡು ತಿಳಿಸಿದ್ದಾರೆ.  ಈಗಾಗಲೇ ಈ ಕಾಯ್ದೆಯನ್ನು 14 ರಾಜ್ಯಗಳಲ್ಲಿ ಅನುಷ್ಠಾನ ಮಾಡಿವೆ. ಕೆಲವು ಕರಡುಗಳನ್ನು ಸಿದ್ಧಪಡಿಸಬೇಕಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ 15 ದಿನಗಳ ಕಾಲಾವಕಾಶ ಕೇಳಿದೆ. ಇನ್ನು ಹದಿನೈದು ದಿನಗಳಲ್ಲಿ ಜಾರಿಗೆ ಬರಲಿದೆ ಎಂದು ಹೇಳಿದರು.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಿಯಲ್ ಎಸ್ಟೇಟ್ ಕಾಯ್ದೆ ಜಾರಿಗೆ ಬರುವುದರಿಂದ ಭೂ ಮಾಲೀಕರು ಮತ್ತು ಖರೀದಿಸುವವರಿಗ ಯಾವುದೇ ರೀತಿಯ ಸಮಸ್ಯೆ ಉಂಟಾಗುವುದಿಲ್ಲ. ಪಾರದರ್ಶಕತೆ ತರುವ ಏಕೈಕ ಉದ್ದೇಶದಿಂದ ಇದನ್ನು ಜಾರಿಗೆ ತಂದಿದ್ದೇವೆ. ಗ್ರಾಹಕನೇ ನಿಜವಾಗಿಯೂ ರಾಜನಾಗುತ್ತಾನೆ ಎಂದು ತಿಳಿಸಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )

Sri Raghav

Admin