ಕಲ್ಲುಬಂಡೆಗೆ ಬೈಕ್ ಡಿಕ್ಕಿ, ಸವಾರ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

tumakuru

ತುಮಕೂರು, ಮೇ 2-ದ್ವಿಚಕ್ರ ವಾಹನವೊಂದು ಸವಾರನ ನಿಯಂತ್ರಣ ತಪ್ಪಿ ರಸ್ತೆಬದಿಯ  ಕಲ್ಲುಬಂಡೆಗೆ ಅಪ್ಪಳಿಸಿದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಶಿರಾ ತಾಲೂಕಿನ ಗೊಲ್ಲರಹಳ್ಳಿಯಲ್ಲಿ ನಡೆದಿದೆ.ವೇಗವಾಗಿ ಬೈಕ್ ಚಲಾಯಿಸಿಕೊಂಡು ಬಂದ ಸವಾರ ನಿಯಂತ್ರಣ ತಪ್ಪಿ ಕಲ್ಲು ಬಂಡೆಗೆ ಅಪ್ಪಳಿಸಿದ್ದು, ತಲೆಗೆ ತೀವ್ರ ಪೆಟ್ಟಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.ಈ ಸಂಬಂಧ ಪಟ್ಟನಾಯಕನಹಳ್ಳಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮಕೈಗೊಂಡಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin