ಪತಿಯ ಕಿರುಕುಳದಿಂದ ಮನನೊಂದ ಪತ್ನಿ ಆತ್ಮಹತ್ಯೆ

ಈ ಸುದ್ದಿಯನ್ನು ಶೇರ್ ಮಾಡಿ

hanging -suicide

ನೆಲಮಂಗಲ, ಮೇ 2-ಪತಿಯ ಕಿರುಕುಳದಿಂದ ಮನನೊಂದು ಪತ್ನಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಟ್ಟಣದ ಸುಭಾಷ್‍ನಗರದಲ್ಲಿ ನಡೆದಿದೆ.ಪುನೀತ್ ಎಂಬುವರ ಪತ್ನಿ ವನಿತಾ(25) ಮೃತ ಮಹಿಳೆಯಾಗಿದ್ದು, ಕಳೆದ ರಾತ್ರಿ ಈ ದುರ್ಘಟನೆ ನಡೆದಿದೆ. ಇಂದು ಬೆಳಗ್ಗೆ ಪ್ರಕರಣ ಬೆಳಕಿಗೆ ಬಂದಿದ್ದು, ಮೃತಳ ಪೋಷಕರು ಕೊಲೆ ಮಾಡಲಾಗಿದೆ ಎಂದು ಪೊಲೀಸರಿಗೆ ದೂರು ನೀಡಿದ್ದಾರೆ.

ಕಳೆದ ಎರಡು ವರ್ಷಗಳ ಹಿಂದೆ ಮದುವೆಯಾಗಿದ್ದು, ಆದರೆ, ಇತ್ತೀಚೆಗೆ ಅಳಿಯ ಮಗಳಿಗೆ ಕಿರುಕುಳ ನೀಡುತ್ತಿದ್ದ. ದೇಹದ ಮೇಲೆ ಗಾಯದ ಗುರುತುಗಳು ಇರುವುದರಿಂದ ಆತನೇ ಕೊಲೆ ಮಾಡಿರುವ ಸಾಧ್ಯತೆ ಇದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.ನೆಲಮಂಗಲ ಪಟ್ಟಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin