ಮಳೆಗಾಗಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು

ಈ ಸುದ್ದಿಯನ್ನು ಶೇರ್ ಮಾಡಿ

pandavapura-4
ಪಾಂಡವಪುರ, ಮೇ 2- ಗ್ರಾಮದ ಜನರು ಒಂದೆಡೆ ಸೇರಿ ಭೀಕರ ಬರಗಾಲ ಎದುರಾಗಿರುವ ಹಿನ್ನೆಲೆಯಲ್ಲಿ ಸಂಕಷ್ಟದಿಂದ ಪಾರು ಮಾಡುವಂತೆ ದೇವರಲ್ಲಿ ಪ್ರಾರ್ಥಿಸಿ ಮಳೆಗಾಗಿ ಕಪ್ಪೆಗಳ ಮದುವೆ ಮಾಡಿದರು.ತಾಲೂಕಿನ ಟಿ.ಎಸ್.ಛತ್ರ ಗ್ರಾಮದಲ್ಲಿ ಗಂಡು ಕಪ್ಪೆ ಹಾಗೂ ಹೆಣ್ಣು ಕಪ್ಪೆಗಳಿಗೆ ಮದುವೆ ಮಾಡಲಾಯಿತು.ಮನುಷ್ಯರಿಗೆ ಸಂಪ್ರದಾಯ ಹಾಗೂ ಶಾಸ್ತ್ರೋಕ್ತವಾಗಿ ಮದುವೆ ಮಾಡುವ ರೀತಿಯಲ್ಲಿಯೇ ಕಪ್ಪೆಗಳಿಗೂ ಕೂಡ ಸಂಪ್ರದಾಯ ಹಾಗೂ ಶಾಸ್ತ್ರೋಕ್ತವಾಗಿ ಮದುವೆ ಕಾರ್ಯ ನಡೆಸಲಾಯಿತು. ಕಪ್ಪೆಗಳಿಗೆ ತಾಳಿ ಕಟ್ಟಿಸುವ ಮೂಲಕ ಮೂರು ದಿನಗಳ ಕಾಲ ನಡೆದ ಮದುವೆ ಕಾರ್ಯಕ್ರಮದಲ್ಲಿ ಗ್ರಾಮದ ಮಹಿಳೆಯರು ಹಾಗೂ ಪುರುಷರೇ ಕಪ್ಪೆಗಳ ಸಂಬಂಧಿಗಳಾಗಿ ಭಾಗಿಯಾಗಿದ್ದರು. ನಂತರ ಅನ್ನ ಸಂತರ್ಪಣೆ ಏರ್ಪಡಿಸಲಾಗಿತ್ತು.
ವಿಶೇಷ ಪೂಜೆ :
ಮಳೆಗಾಗಿ ಪಟ್ಟಣದ ಬೀರಶೆಟ್ಟಹಳ್ಳಿ ಗ್ರಾಮದಲ್ಲಿ ಶ್ರೀ ವೀರಾಂಜನೇಯ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಗ್ರಾಮದ ಜನರು ಪ್ರಾರ್ಥನೆ ಮಾಡಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin