ಯಡಿಯೂರಪ್ಪ ಮುಖ್ಯಮಂತ್ರಿ ಆಗುವುದು ಖಚಿತ ಎಂದು ಅಚ್ಚರಿ ಮೂಡಿಸಿದ ಈಶ್ವರಪ್ಪ

ಈ ಸುದ್ದಿಯನ್ನು ಶೇರ್ ಮಾಡಿ

EshwarAPP--01

ರಾಯಚೂರು, ಮೇ 2- ಇನ್ನು ಕೆಲವೇ ದಿನದಲ್ಲೇ ಬಿಜೆಪಿಯಲ್ಲಿನ ಎಲ್ಲಾ ಬಿಕ್ಕಟ್ಟು ಬಗೆಹರಿಯಲಿದೆ. ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬರಲಿದೆ. ಯಡಿಯೂರಪ್ಪ ಮುಖ್ಯಮಂತ್ರಿ ಆಗುವುದು ಖಚಿತ ಎಂದು ಹೇಳುವ ಮೂಲಕ ಮೇಲ್ಮನೆ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಅಚ್ಚರಿ ಮೂಡಿಸಿದ್ದಾರೆ.  ಇಂದು ಇಲ್ಲಿನ ಗುರು ರಾಘವೇಂದ್ರ ಸ್ವಾಮಿಗಳ ಮಠಕ್ಕೆ ಭೇಟಿ ನೀಡಿ ರಾಯರ ದರ್ಶನ ಪಡೆದು ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ಬೆಳವಣಿಗೆಗಳಿಂದ ನನಗೂ ಬೇಸರವಾಗಿದೆ. ವರಿಷ್ಠರು ಇದನ್ನೆಲ್ಲಾ ಬಗೆಹರಿಸುತ್ತಾರೆ. ಮುಂದಿನ ದಿನಗಳಲ್ಲಿ ಸಂಘಟನೆಯತ್ತ ಹೆಚ್ಚು ಒತ್ತು ನೀಡುತ್ತೇನೆ ಎಂದು ಹೇಳಿದ್ದಾರೆ.



ಇದೇ ವೇಳೆ ಮೈಸೂರಿನಲ್ಲಿ ನಡೆಯಲಿರುವ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ಬಗ್ಗೆ ನನಗೆ ಏನೂ ಗೊತ್ತಿಲ್ಲ. ಅದರ ಬಗ್ಗೆ ಮಾಹಿತಿಯೂ ಬಂದಿಲ್ಲ. ಅದರಲ್ಲಿ ಪಾಲ್ಗೊಳ್ಳಬೇಕೇ, ಬೇಡವೇ ಎಂಬುದರ ಬಗ್ಗೆ ಯೋಚಿಸುತ್ತಿದ್ದೇನೆ ಎಂದು ತಿಳಿಸಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin