ಲೆರೋ-ಬೈಕ್ ಡಿಕ್ಕಿ : ಹಿಂಬದಿ ವ್ಯಕ್ತಿ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

ತುಮಕೂರು, ಮೇ 2 – ಬುಲೆರೋ ಹಾಗೂ ದ್ವಿಚಕ್ರ ವಾಹನ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಹಿಂಬದಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕೊರಟಗೆರೆ ತಾಲೂಕಿನ ಅಕ್ಕಿರಾಂಪುರ ಗ್ರಾಮದಲ್ಲಿ ಸಂಭವಿಸಿದೆ.ಹೊಳವನಹಳ್ಳಿ ಗ್ರಾಮದ ಅಂಬೇಡ್ಕರ್ ಬಡಾವಣೆ ನಿವಾಸಿ ಮಂಜುನಾಥ್(23) ಮೃತಪಟ್ಟ ಹಿಂಬದಿ ಸವಾರ.ತುಮಕೂರು ಕಡೆಯಿಂದ ಮಧುಗಿರಿ ಕಡೆಗೆ ತೆರಳುತ್ತಿದ್ದ ಬುಲೆರೋ ವಾಹನ, ಎದುರಿಗೆ ಬಂದ ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾಗಿದೆ. ಡಿಕ್ಕಿಯಾದ ರಭಸಕ್ಕೆ ಹಿಂಬದಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.ಈ ಸಂಬಂಧ ಕೊರಟಗೆರೆ ಠಾಣೆ ವೃತ್ತ ನಿರೀಕ್ಷಕ ಮುನಿರಾಜು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಕ್ರಮ ಕೈಗೊಂಡಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin