ಸಿಇಟಿ ಪರೀಕ್ಷೆ ಬರೆದ 1.85 ಲಕ್ಷ ವಿದ್ಯಾರ್ಥಿಗಳು

ಈ ಸುದ್ದಿಯನ್ನು ಶೇರ್ ಮಾಡಿ

CET-012

ಬೆಂಗಳೂರು, ಮೇ 2- ಎಂಜಿನಿಯರಿಂಗ್ ಹಾಗೂ ವೈದ್ಯಕೀಯ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‍ಗಳ ಪ್ರವೇಶಕ್ಕೆ ಸಂಬಂಧಿಸಿದಂತೆ ಮೂರು ದಿನಗಳ ಕಾಲ ಸಾಮಾನ್ಯ ಪ್ರವೇಶ (ಸಿಇಟಿ) ಪರೀಕ್ಷೆ ರಾಜ್ಯದ್ಯಾಂತ ಆರಂಭವಾಯಿತು. ರಾಜಧಾನಿ ಬೆಂಗಳೂರು ಸೇರಿದಂತೆ ಎಲ್ಲೆಡೆ ಏಕಕಾಲಕ್ಕೆ ಪರೀಕ್ಷೆ ಯಾವುದೇ ಗೊಂದಲಗಳಿಲ್ಲದೆ ಪರೀಕ್ಷೆ ನಡೆದಿದೆ.ವಿಶೇಷ ಎಂದರೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಿಇಟಿ ಪರೀಕ್ಷೆಯನ್ನು ಈ ಬಾರಿ ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳೆರಡರಲ್ಲೂ ನಡೆಸಿತು. ಈ ವರ್ಷ ಒಟ್ಟು 1.85ಲಕ್ಷ ಅಭ್ಯರ್ಥಿಗಳು ಸಿಇಟಿ ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದರು. ಬೆಂಗಳೂರಿನ 82 ಪರೀಕ್ಷಾ ಕೇಂದ್ರಗಳು ಸೇರಿದಂತೆ ರಾಜ್ಯದಲ್ಲಿ ಒಟ್ಟು 404 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿತ್ತು.



ಇನ್ನು ಬೆಳಗ್ಗೆ 10.30 ರಿಂದ 11.50ರವರೆಗೆ ಜೀವಶಾಸ್ತ್ರ ಪರೀಕ್ಷೆ ನಡೆದರೆ, 2.30ರಿಂದ 3.50ರವರೆಗೆ ಗಣಿತ ಪರೀಕ್ಷೆ ನಡೆಯಿತು. ನಾಳೆ ಬೆಳಗ್ಗೆ 10.30ರಿಂದ 11.50ರವರೆಗೆ ಭೌತಶಾಸ್ತ್ರ ಹಾಗೂ ಮಧ್ಯಾಹ್ನ 2.30ರಿಂದ 3.50ರವರೆಗೆ ರಸಾಯನಶಾಸ್ತ್ರ ಪರೀಕ್ಷೆ ನಡೆಯಲಿದೆ.   ಗಡಿನಾಡು ಹಾಗೂ ಹೊರನಾಡು ಅಭ್ಯರ್ಥಿಗಳಿಗಾಗಿ ಕನ್ನಡ ಭಾಷಾ ಪರೀಕ್ಷೆಯನ್ನು ಇದೇ 4 ರಂದು 11.30ರಿಂದ 12.30ರವರೆಗೆ ಬೆಂಗಳೂರು ಕೇಂದ್ರದಲ್ಲಿ ಮಾತ್ರ ನಡೆಸಲಾಗುತ್ತದೆ. ರಾಜ್ಯ ಸರ್ಕಾರ ಈಗಾಗಲೇ ಪರೀಕ್ಷೆಗಾಗಿ ಭಾರೀ ಭದ್ರತೆ ಕೈಗೊಂಡಿದ್ದು, ಆಯಾ ಜಿಲ್ಲಾಧಿಕಾರಿಗಳು ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಸಹಾಯಕ ಆಯುಕ್ತರನ್ನು ವೀಕ್ಷಕರನ್ನಾಗಿ ನೇಮಕ ಮಾಡಿದ್ದರು.

ಪರೀಕ್ಷಾ ಕಾರ್ಯಕ್ಕೆ ಒಟ್ಟು 404 ವೀಕ್ಷಕರು, 404 ಪ್ರಶ್ನೆ ಪತ್ರಿಕಾ ಪಾಲಕರು, 808 ವಿಶೇಷ ಜಾಗೃತ ದಳದ ಸದಸ್ಯರನ್ನು ನಿಯೋಜಿಸಲಾಗಿತ್ತು. ಅಲ್ಲದೆ, 11,625 ಕೊಠಡಿ ಮೇಲ್ವಿಚಾರಕರು ಮತ್ತು 32 ಸಾವಿರ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಲಾಗಿದೆ.  ಇನ್ನು ಉನ್ನತ ಶಿಕ್ಷಣ ಇಲಾಖೆ ಅಭ್ಯರ್ಥಿಗಳಿಗೆ ಕೆಲವೊಂದು ಪರೀಕ್ಷಾ ನಿಬಂಧನಗಳನ್ನ ವಿಧಿಸಲಾಗಿದ್ದು, ಪಾರಿಕ್ಷಾರ್ಥಿ ಅರ್ಧ ಗಂಟೆ ಮುಂಚಿತವಾಗಿ ಪರೀಕ್ಷಾ ಕೇಂದ್ರದಲ್ಲಿ ಹಾಜರಿರಬೇಕು. ನೀಲಿ ಅಥವಾ ಕಪ್ಪು ಬಣ್ಣದ ಬಾಲ್ ಪಾಯಿಂಟ್ ಪೆನ್ನನ್ನು ಬಳಸಬೇಕು. ಪ್ರವೇಶಪತ್ರದ ಜೊತೆಗೆ ಕಾಲೇಜಿನ ಗುರುತಿನ ಚೀಟಿ, ದ್ವಿತೀಯ ಪಿಯುಸಿ ಪರೀಕ್ಷಾ ಪ್ರವೇಶ ಪತ್ರ, ಬಸ್‍ಪಾಸ್, ಆಧಾರ್ ಕಾರ್ಡ್ ಸೇರಿದಂತೆ ಯಾವುದಾದರೊಂದು ಗುರುತಿನ ಚೀಟಿ ತರಬಾರದೆಂದು ಸೂಚಿಸಲಾಗಿತ್ತು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin