ಟಿಕೆಟ್ ದರವನ್ನು ಗರಿಷ್ಠ 200 ರೂ. ಗೆ ನಿಗದಿಗೊಳಿಸಿ ಅಧಿಕೃತ ಆದೇಶ ಹೊರಡಿಸಿದ ಸರ್ಕಾರ

ಈ ಸುದ್ದಿಯನ್ನು ಶೇರ್ ಮಾಡಿ

Multiflex

ಬೆಂಗಳೂರು. ಮೇ.2 : ಕೊನೆಗೂ ರಾಜ್ಯ ಸರ್ಕಾರ ಅಧಿಕೃತವಾಗಿ ಮಲ್ಟಿಪ್ಲೆಕ್ಸ್ ಸೇರಿದಂತೆ ಎಲ್ಲಾ ಚಿತ್ರಮಂದಿರಗಳಲ್ಲಿ ಏಕರೂಪದ ಸಿನಿಮಾ ಟಿಕೆಟ್ ದರವನ್ನು 200 ರೂ. ನಿಗದಿಗೊಳಿಸಿ, ಇಂದಿನಿಂದಲೇ ಜಾರಿಗೆ ಬರುವಂತೆ ಆದೇಶ ಹೊರಡಿಸಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಮಲ್ಪಿಫ್ಲೆಕ್ಸ್ ಚಿತ್ರಮಂದಿರಗಳಲ್ಲಿ ಚಿತ್ರ ಪ್ರದರ್ಶನಕ್ಕೆ 200 ರೂ. ದರ ನಿಗದಿಪಡಿಸಲು ಕ್ರಮ ಕೈಗೊಳ್ಳುವುದಾಗಿ ಪ್ರಕಟಿಸಿದ್ದರು. ಅದರಂತೆ ಇದೀಗ ಸಿಎಂ ಆದೇಶಕ್ಕೆ ಹಣಕಾಸು ಇಲಾಖೆ ಅನುಮೋದನೆ ಸಿಕ್ಕಿದ್ದ ಹಿನ್ನೆಲೆಯಲ್ಲಿ ಅಧಿಕೃತವಾಗಿ ಅಧಿಸೂಚನೆ ಹೊರಬಿದ್ದಿದೆ.  ಆದರೆ ಈ ಆದೇಶ ಗೋಲ್ಡ್ ಸ್ಕ್ರೀನ್ ಮತ್ತು ಗೋಲ್ಡ್ ಕ್ಲಾಸ್ ಸೀಟು ಗಳಿಗೆ(ಶೇ.10ರಷ್ಟು ವಿನಾಯ್ತಿ ನೀಡಿದೆ) ಅನ್ವಯಿಸುವುದಿಲ್ಲ ಎನ್ನಲಾಗಿದೆ.ಈ ಆದೇಶ ಎಲ್ಲಾ ಭಾಷೆಯ ಚಿತ್ರಗಳಿಗೆ ಅನ್ವಯಿಸಲಿದ್ದು ಟಿಕೆಟ್ ದರ ಗರಿಷ್ಠ 200 ರೂ. ಕಡ್ಡಾಯವಾಗಿದೆ. ಮಲ್ಟಿಪ್ಲೆಕ್ಸ್ ಸೇರಿ ಎಲ್ಲಾ ಚಿತ್ರಮಂದಿರಗಳಲ್ಲಿ ಹೆಚ್ಚಿನ ದರ ವಿಧಿಸುವಂತಿಲ್ಲ. ಚಿತ್ರಮಂದಿರದ ಗೋಲ್ಡ್ ಕ್ಲಾಸ್ ಸೀಟ್ ಗಳಿಗೆ ಶೇ. 10 ರಷ್ಟು ವಿನಾಯಿತಿ ನೀಡಲಾಗಿದೆ. 90 ರಷ್ಟು ಸೀಟ್ ಗಳಿಗೆ ಟಿಕೆಟ್ ದರ 200 ರೂ. ನಿಗದಿ ಮಾಡಲಾಗಿದೆ.  ಈ ಆದೇಶ ಸಿನಿಪ್ರಿಯರಲ್ಲಿ ಸಂತಸ ಮೂಡಿಸಿದ್ದು, ಮಲ್ಟಿಫ್ಲೆಕ್ಸ್ ಗಳಿಂದ ದೂರವಿದ್ದವರೂ ಸಹ ಮಲ್ಟಿಪ್ಲೆಕ್ಸ್ ಗಳಲ್ಲಿ ಸಿನಿಮಾ ನೋಡುವ ಅವಕಾಶ ಸಿಕ್ಕಂತಾಗಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin