ಈಶು ಬ್ರಿಗೇಡ್‍ಗೆ ತಕ್ಕ ತಿರುಗೇಟು ಕೊಟ್ಟ ಯಡಿಯೂರಪ್ಪ

ಈ ಸುದ್ದಿಯನ್ನು ಶೇರ್ ಮಾಡಿ

Srinivas--P

ಬೆಂಗಳೂರು, ಮೇ 3- ದಲಿತ ಮುಖಂಡ ವಿ.ಶ್ರೀನಿವಾಸ ಪ್ರಸಾದ್ ಅವರನ್ನು ಪಕ್ಷದ ಉಪಾಧ್ಯಕ್ಷರನ್ನಾಗಿ ಹಾಗೂ ಕುರುಬ ಸಮುದಾಯದ ಎಂ.ನಾಗರಾಜ್ ಅವರನ್ನು ಕಾರ್ಯಕಾರಿಣಿಗೆ ವಿಶೇಷ ಆಹ್ವಾನಿತರನ್ನಾಗಿ ನೇಮಿಸುವ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ಮೇಲ್ಮನೆ ಪ್ರತಿಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪನವರ ಸಾರಥ್ಯದ ಬ್ರೀಗೆಡ್‍ಗೆ ತಿರುಗೇಟು ನೀಡಿದ್ದಾರೆ.  ಇತ್ತೀಚೆಗೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿ ಉಪ ಚುನಾವಣೆಯಲ್ಲಿ ಸೋಲನ್ನಪ್ಪಿದ್ದರೂ ನಂಜನಗೂಡಿನಲ್ಲಿ ಬಿಜೆಪಿ ಸುಮಾರು 70 ಕ್ಕೂ ಹೆಚ್ಚು ಸಾವಿರ ಮತಗಳನ್ನು ಪಡೆಯಲು ಸಾಧ್ಯವಾದ ಹಿನ್ನಲೆಯಲ್ಲಿ ಅವರಿಗೆ ಈ ಸ್ಥಾನವನ್ನು ಬಿಎಸ್‍ವೈ ಮನ್ನಣೆ ನೀಡಿದ್ದಾರೆ ಎನ್ನಲಾಗಿದೆ. ಹಳೆ ಮೈಸೂರು ಭಾಗದಲ್ಲಿ ಪಕ್ಷದ ವರ್ಚಸ್ಸು ಹೆಚ್ಚಿಸುವ ನಿಟ್ಟಿನಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ.ಅದೇ ರೀತಿ ಬೆಂಗಳೂರು ನಗರದಲ್ಲೂ ಕುರುಬ ಸಮುದಾಯದ ನಾಯಕತ್ವ ಬೆಳೆಸುವ ಹಿನ್ನಲೆಯಲ್ಲಿ ಎಂ.ನಾಗರಾಜು ಅವರಿಗೆ ಆದ್ಯತೆ ನೀಡಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ. ಮೂರು ಬಾರಿ ಪಾಲಿಕೆ ಸದಸ್ಯರಾಗಿ ಆಡಳಿತ ಪಕ್ಷ ಮತ್ತು ವಿಪಕ್ಷದ ನಾಯಕರಾಗಿ ಪಕ್ಷವನ್ನು ಯಶಸ್ವಿಯಾಗಿ ಮುನ್ನಡೆಸಿದ ಹೆಗ್ಗಳಿಕೆ ನಾಗರಾಜು ಅವರಿಗಿದೆ.  ಆದರೂ ಕಾಂಗ್ರೆಸ್ ಪಕ್ಷ ಅವರ ಸೇವೆಯನ್ನು ಸಮರ್ಪಕವಾಗಿ ಬಳಸಿಕೊಳ್ಳಲು ವಿಫಲವಾದ ಹಿನ್ನಲೆಯಲ್ಲಿ ಕಳೆದ ಆರು ತಿಂಗಳ ಹಿಂದೆ ಅವರು ಬಿಜೆಪಿಗೆ ಸೇರ್ಪಡೆಯಾಗಿದ್ದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin