ಕುಡಿಯುವ ನೀರಿಗೆ ದುಪ್ಪಟ್ಟು ದರ : ಬೆಂಗಳೂರಿನ ಮಾಲ್‍ಗಳಿಗೆ ಅಧಿಕಾರಿಗಳ ದಾಳಿ

ಈ ಸುದ್ದಿಯನ್ನು ಶೇರ್ ಮಾಡಿ

Drinking--01

ಬೆಂಗಳೂರು, ಮೇ 3- ಕುಡಿಯುವ ನೀರಿಗೆ ನಿಗದಿಗಿಂತ ದುಪ್ಪಟ್ಟು ದರ ವಸೂಲಿ ಮಾಡಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು ಹಲವು ಮಾಲ್‍ಗಳಿಗೆ ದಿಢೀರ್ ದಾಳಿ ನಡೆಸಿದರು. ಮಂತ್ರಿಮಾಲ್, ಒರಾಯನ್, ಗರುಡಾಮಾಲ್, ಯುಬಿಸಿಟಿ ಮತ್ತಿತರ ಮಾಲ್‍ಗಳಿಗೆ ಬೆಳಗ್ಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಜಂಟಿಆಯುಕ್ತ ಶಿವಪ್ರಸಾದ್ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿದರು.



ಮಾಲ್‍ಗಳಲ್ಲಿ ಕುಡಿಯುವ ನೀರಿಗೆ ದುಪ್ಪಟ್ಟು ದರ ಪಡೆಯುತ್ತಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದರ ಹಿನ್ನೆಲೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಯು.ಟಿ.ಖಾದರ್ ಮಾಲ್‍ಗಳಲ್ಲಿ ಪರಿಶೀಲನೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ಇಂದು ಶಿವಪ್ರಸಾದ್ ಮತ್ತಿತರ ಅಧಿಕಾರಿಗಳು ಮಾಲ್‍ಗಳಿಗೆ ದಿಢೀರ್ ದಾಳಿ ಮಾಡಿ ಪರಿಶೀಲಿಸಿದರು.  ಯಾವುದೇ ಕಾರಣಕ್ಕೂ ಗ್ರಾಹಕರಿಂದ ಕುಡಿಯುವ ನೀರಿಗೆ ಹೆಚ್ಚು ಹಣ ವಸೂಲಿ ಮಾಡಬಾರದು. ಒಂದು ವೇಳೆ ಮಾಡಿದರೆ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಮಾಲ್‍ನವರಿಗೆ ಶಿವಪ್ರಸಾದ್ ಎಚ್ಚರಿಕೆ ನೀಡಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin