ಕುಮುಟಾ ಬಳಿ ಉರುಳಿ ಬಿದ್ದ ಗ್ಯಾಸ್ ಟ್ಯಾಂಕರ್‍, ತಪ್ಪಿತು ಭಾರಿ ಅನಾಹುತ

ಈ ಸುದ್ದಿಯನ್ನು ಶೇರ್ ಮಾಡಿ

Gas-Tanker--01

ಕಾರವಾರ, ಮೇ 3-ಬೆಂಗಳೂರು ಕಡೆಗೆ ಬರುತ್ತಿದ್ದ ಗ್ಯಾಸ್ ಟ್ಯಾಂಕರ್‍ವೊಂದು ಚಾಲಕನ ನಿಯಂತ್ರಣ ತಪ್ಪಿ ಉತ್ತರ ಕನ್ನಡ ಜಿಲ್ಲೆಯ ಕುಮುಟಾ ಬಳಿ ಉರುಳಿ ಬಿದ್ದಿರುವ ಘಟನೆ ಇಂದು ಮುಂಜಾನೆ ನಡೆದಿದೆ.  ಘಟನೆಯಲ್ಲಿ ಚಾಲಕ ಹಾಗೂ ಕ್ಲೀನರ್ ಗಾಯಗೊಂಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಸ್ಥಳಕ್ಕೆ ಧಾವಿಸಿದ ಕುಮುಟಾ ಪೊಲೀಸರು ಹಾಗೂ ತುರ್ತು ಪರಿಹಾರ ಸಿಬ್ಬಂದಿ ಯಾವುದೇ ಅನಾಹುತ ಸಂಭವಿಸದಂತೆ ಮುಂಜಾಗ್ರತಾ ಕ್ರಮ ಕೈಗೊಂಡಿದ್ದಾರೆ.



ಅದೃಷ್ಟವಶಾತ್ ಟ್ಯಾಂಕರ್‍ನಲ್ಲಿದ್ದ ಅನಿಲ ಸೋರಿಕೆಯಾಗಿಲ್ಲ. ಗಾಯಗೊಂಡಿರುವವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ರಸ್ತೆಯ ಬದಿಯಲ್ಲೇ ಟ್ಯಾಂಕರ್ ಉರುಳಿರುವುದರಿಂದ ಈ ಭಾಗದಲ್ಲಿ ವಾಹನ ಸಂಚಾರಕ್ಕೂ ಕೂಡ ಕೆಲ ಕಾಲ ಅಡಚಣೆಯಾಗಿತ್ತು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin