ಪ್ರತಿ ವರ್ಷ 12,000 ರೈತರ ಆತ್ಮಹತ್ಯೆ : ಸುಪ್ರೀಂಗೆ ಕೇಂದ್ರ ಸರ್ಕಾರ ಮಾಹಿತಿ

ಈ ಸುದ್ದಿಯನ್ನು ಶೇರ್ ಮಾಡಿ

Former-Suicide-e01

ನವದೆಹಲಿ, ಮೇ 3-ದೇಶದಲ್ಲಿ ಪ್ರತಿ ವರ್ಷ 12,000ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಎಂದು ಕೇಂದ್ರ ಸರ್ಕಾರವು ಸುಪ್ರೀಂಕೋರ್ಟ್‍ಗೆ ಮಾಹಿತಿ ನೀಡಿದೆ.
ರೈತರ ಆದಾಯ ಮತ್ತು ಸಾಮಾಜಿಕ ಭದ್ರತೆ ಸುಧಾರಣೆಗಾಗಿ ಬಹು ಆಯಾಮದ ಕ್ರಮಗಳನ್ನು ಕೈಗೊಂಡಿದ್ದರೂ 2013ರಿಂದ ಪ್ರತಿ ವರ್ಷ ಕೃಷಿ ಕ್ಷೇತ್ರದಲ್ಲಿ ಇಷ್ಟು ಸಂಖ್ಯೆಯ ಆತ್ಮಹತ್ಯೆ ಪ್ರಕರಣಗಳು ವರದಿಯಾಗಿದೆ ಸರ್ವೋಚ್ಚ ನ್ಯಾಯಾಲಯಕ್ಕೆ ತಿಳಿಸಲಾಗಿದೆ.   ಸಿಟಿಜನ್ ರಿಸೋಸರ್ಸ್ ಅಂಡ್ ಆಕ್ಷನ್ ಇನಿಷಿಯೇಟಿವ್ ಎಂಬ ಸರ್ಕಾರೇತರ ಸಂಸ್ಥೆ ರೈತರ ಆತ್ಮಹತ್ಯೆ ಪ್ರಕರಣಗಳ ಕುರಿತು ಆತಂಕ ವ್ಯಕ್ತಪಡಿಸಿ ಸಲ್ಲಿಸಲಾಗಿದ್ದ ಅರ್ಜಿ ಕುರಿತು ಸುಪ್ರೀಂಕೋರ್ಟ್ ವಿಚಾರಣೆ ನಡೆಸಿತು.ಕೃಷಿ ಕ್ಷೇತ್ರದಲ್ಲಿ ಉದ್ಭವಿಸಿರುವ ಸಮಸ್ಯೆಗಳು ಮತ್ತು ರೈತರ ಬವಣೆಗಳನ್ನು ನೀಗಿಸಲು ಕೇಂದ್ರ ಸರ್ಕಾರ ಕೈಗೊಂಡ ಪೂರಕ ಕ್ರಮಗಳ ಕುರಿತು ಮುಖ್ಯ ನ್ಯಾಯಮೂರ್ತಿ ಜೆ.ಎಸ್.ಖೇಹರ್ ನೇತೃತ್ವದ ಪೀಠವು ಕೇಂದ್ರ ಸರ್ಕಾರದಿಂದ ವಿವರಣೆ ಕೋರಿತು.   ಸರ್ಕಾರದ ಪರವಾಗಿ ಉತ್ತರ ನೀಡಿದ ಹೆಚ್ಚುವರಿ ಸಾಲಿಸಿಟರ್ ಜನರಲ್ ಪಿ.ಎಸ್. ನರಸಿಂಹ, ಕಡಿಮೆ ಆದಾಯದ ರೈತರ ಹಿತರಕ್ಷಣೆಗಾಗಿ ಕೇಂದ್ರ ಅನೇಕ ಕ್ರಮಗಳನ್ನು ಕೈಗೊಂಡಿದೆ. ಹೆಚ್ಚುತ್ತಿರುವ ರೈತರ ಆತ್ಮಹತ್ಯೆ ಪ್ರಕರಣಗಳನ್ನು ತಡೆಗಟ್ಟಲು ಕೃಷಿಕರ ಆದಾಯ ಹೆಚ್ಚಿಸಲು ಪೂರಕ ಕ್ರಮಗಳನ್ನು ಅನುಷ್ಠಾನಗೊಳಿಸಿದೆ ಎಂದು ಸಮಜಾಯಿಷಿ ನೀಡಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin