ಮಹಡಿ ಮೇಲಿಂದ ಹಾರಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ

ಈ ಸುದ್ದಿಯನ್ನು ಶೇರ್ ಮಾಡಿ

house-floor-jumping

ಬೀದರ್, ಮೇ 3- ಎಂಬಿಬಿಎಸ್ ವಿದ್ಯಾರ್ಥಿಯೊಬ್ಬ ಮಹಡಿ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನ್ಯೂಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಕೇರಳ ಮೂಲದ ಕೀರ್ತಿ (21) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಕೇರಳ ಮೂಲದ ಈತ ಬೀದರ್‍ನ ಮೆಡಿಕಲ್ ಕಾಲೇಜಿನ ಹಾಸ್ಟೆಲ್‍ನಲ್ಲಿ ಇದ್ದುಕೊಂಡು ಎಂಬಿಬಿಎಸ್‍ನ 9ನೆ ಸೆಮಿಸ್ಟರ್‍ನ ವ್ಯಾಸಂಗ ಮಾಡುತ್ತಿದ್ದ.ಇಂದು ಬೆಳಗ್ಗೆ 3ನೆ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ಕಾರಣ ಏನೆಂಬುದು ತಿಳಿದುಬಂದಿಲ್ಲ.ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin