ಸಾರ್ವಜನಿಕ ಲೆಕ್ಕಪತ್ರ ಸಮಿತಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಖರ್ಗೆ

ಈ ಸುದ್ದಿಯನ್ನು ಶೇರ್ ಮಾಡಿ

Mallikarjun-KLharge

ನವದೆಹಲಿ. ಮೇ.03 : 21 ಸದಸ್ಯ ಬಲದ ಸಂಸತ್‌ ಸಾರ್ವಜನಿಕ ಲೆಕ್ಕಪತ್ರ ಸಮಿತಿ(ಪಿಎಸಿ) ಅಧ್ಯಕ್ಷರಾಗಿ ಲೋಕಸಭೆ ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ್ ಖರ್ಗೆ ಅವರು ಇಂದು (03-05-2017) ಅಧಿಕಾರ ವಹಿಸಿಕೊಂಡಿದ್ದಾರೆ. ಇಂದು ಸಂಜೆ ಸಂಸತ್ ಭವನದಲ್ಲಿ ಪಿಎಸಿ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ್ ಖರ್ಗೆ ಅವರು ಅಧಿಕಾರ ಸ್ವೀಕರಿಸಿದರು. ಪಿಎಸಿ ಅಧ್ಯಕ್ಷರಾಗಿದ್ದ ಕೆ.ವಿ.ಥಾಮಸ್‌ ಅವಧಿ ಎಪ್ರಿಲ್‌ 30ರಂದು ಅಂತ್ಯಗೊಂಡಿದ್ದು, ಅವರ ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆ ಅವರನ್ನು ನೇಮಕ ಮಾಡಲಾಗಿದೆ.1950, ಜನವರಿ 26ರಂದು ಅಸ್ತಿತ್ವಕ್ಕೆ ಬಂದ ಸಂಸತ್‌ ಸಾರ್ವಜನಿಕ ಲೆಕ್ಕಪತ್ರ ಸಮಿತಿ ಇದುವರೆಗೆ 1,571 ವರದಿಗಳನ್ನು ನೀಡಿದೆ. 1967ರಲ್ಲಿ ಈ ಸಮಿತಿಗೆ ವಿಪಕ್ಷದ ಯಾವುದಾದರೊಬ್ಬ ನಾಯಕರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡುವ ನಿರ್ಧಾರ ಕೈಗೊಳ್ಳಲಾಗಿತ್ತು

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin