ಕುಡಿಯುವ ನೀರಿಗೆ ಚರಂಡಿ ನೀರು ಮಿಕ್ಸ್ : ಜನರ ಆಕ್ರೋಶ

ಈ ಸುದ್ದಿಯನ್ನು ಶೇರ್ ಮಾಡಿ

ತುಮಕೂರು, ಮೇ 4- ತುಮಕೂರು ಮಹಾನಗರ ಪಾಲಿಕೆಯಲ್ಲಿ ಕುಡಿಯುವ ನೀರಿನಲ್ಲಿ ಚರಂಡಿ ನೀರು ಬೆರೆತು ನೀರಿಗಾಗಿ ಜನರು ಪರದಾಡುವ ಪರಿಸ್ಥಿತಿ ಉಂಟಾಗಿದೆ.ಸಮಸ್ಯೆ ಬಗೆಹರಿಸುವಂತೆ ಪಾಲಿಕೆ ಅಧಿಕಾರಿಗಳು, ಸದಸ್ಯರ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಜರ್‍ಬಾದ್ ನಿವಾಸಿಗಳು ಕಳೆದ ಆರು ತಿಂಗಳಿನಿಂದ ಇದೇ ಸಮಸ್ಯೆ ಎದುರಿಸುತ್ತಿದ್ದರೂ ಪಾಲಿಕೆ ದಿವ್ಯ ನಿರ್ಲಕ್ಷ್ಯ ವಹಿಸಿದೆ.ಕುಡಿಯುವ ನೀರಿನ ಪೈಪ್‍ನಲ್ಲಿ ಒಳಚರಂಡಿ ನೀರು ಬರುತ್ತಿದೆ. ನೀರಿನ ಸಂಪಿನಲ್ಲಿ ಚರಂಡಿ ನೀರನ್ನು ಕಂಡು ಜನ ದಂಗಾಗಿದ್ದಾರೆ. ನಗರದ 12ನೆ ವಾರ್ಡ್‍ನಲ್ಲಿ ಈ ಘಟನೆ ನಡೆದಿದೆ.

ಹಲವು ದಿನಗಳಿಂದ ಕುಡಿಯುವ ನೀರಿಗೆ ಒಳಚರಂಡಿ ನೀರು ಮಿಶ್ರಣವಾಗಿದೆ. 300ಕ್ಕೂ ಹೆಚ್ಚು ಮನೆಗಳ ಜನರು ಕುಡಿಯುವ ನೀರಿಗಾಗಿ ಪರದಾಡುತ್ತಿದ್ದಾರೆ.ಶುದ್ಧ ನೀರಿಗಾಗಿ ಪಾಲಿಕೆಯನ್ನು ಪರಿಪರಿಯಾಗಿ ಬೇಡಿಕೊಂಡರೂ ಅಧಿಕಾರಿಗಳು, ಕಾರ್ಪೊರೇಟರ್ ಗಳು ತಲೆಕೆಡಿಸಿಕೊಳ್ಳುತ್ತಿಲ್ಲ. ಅದಕ್ಕಾಗಿ ಜನ ಬೀದಿಗಿಳಿದು ಹೋರಾಟ ಆರಂಭಿಸಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin