ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಅರ್ಜಿ ಹಾಕಿ ಕುಳಿತಿಲ್ಲ : ಡಿ.ಕೆ.ಶಿವಕುಮಾರ್

ಈ ಸುದ್ದಿಯನ್ನು ಶೇರ್ ಮಾಡಿ

DKShivakumar-01

ಬೆಂಗಳೂರು, ಮೇ 4- ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನಾನು ಅರ್ಜಿ ಹಾಕಿ ಕುಳಿತಿಲ್ಲ. ಆದರೆ ಹೈಕಮಾಂಡ್ ಕೊಟ್ಟ ಜವಾಬ್ದಾರಿಯನ್ನು ನಿಭಾಯಿ ಸಲು ಸಿದ್ದ ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ಇಂದಿಲ್ಲಿ ತಿಳಿಸಿದರು. ಬೆಂಗಳೂರಿನ ಅವರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಖಾಸಗಿ ಪ್ರವಾಸದ ಹಿನ್ನೆಲೆಯಲ್ಲಿ ಅಮೆರಿಕಾಕ್ಕೆ ತೆರಳಿದ್ದೆ. ದೆಹಲಿಗೆ ಹೋದಾಗ ಪಕ್ಷದ ಕಚೇರಿಗೆ ತೆರಳಿ ರಾಜ್ಯ ಉಸ್ತುವಾರಿ ವೇಣುಗೋಪಾಲ್ ಅವರನ್ನು ಭೇಟಿ ಮಾಡಿದ್ದೇನೆ ಹಾಗೂ ಸಹಕಾರ ನೀಡುವುದಾಗಿ ತಿಳಿಸಿದ್ದೇನೆ ಎಂದು ಸ್ಪಷ್ಟಪಡಿಸಿದರು.



ಕೆಪಿಸಿಸಿ ಅಧ್ಯಕ್ಷರ ಸ್ಥಾನ ಆಯ್ಕೆ ಪ್ರಕ್ರಿಯೆ ಎಲ್ಲರೂ ಕೂಡಿ ಮಾಡುವಂತದ್ದು ಹೈಕಮಾಂಡ್ ಯಾವತ್ತು ಆದೇಶ ಹೊರಡಿಸುತ್ತದೋ ಅಂದು ಕೆಪಿಸಿಸಿ ಅಧ್ಯಕ್ಷರು ಆಯ್ಕೆಯಾಗುತ್ತಾರೆ. ಲಿಂಗಾಯಿತ ಸಮುದಾಯಕ್ಕೆ ಸ್ಥಾನ ನೀಡಿದರೆ ಮಹಿಳಾ ಅಧ್ಯಕ್ಷ ಸ್ಥಾನ ತೊರೆಯಬೇಕಾಗುತ್ತದೆ ಎಂಬುದು ಸುಳ್ಳು ಎಂದು ತಿಳಿಸಿದರು. ಪದೇ ಪದೇ ತಮ್ಮ ಹೆಸರು ಪ್ರಸ್ತಾಪವಾಗುತ್ತಿರುವ ಹಾಗೂ ಪಕ್ಷದ ಮುಖಂಡರ ಪಿತೂರಿ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ನನ್ನ ವರ್ಚಸ್ಸಿನಿಂದ ಪದೇ ಪದೇ ನನ್ನ ಹೆಸರನ್ನು ಎಳೆದುತರುವ ಪ್ರಯತ್ನ ನಡೆಯುತ್ತಿದೆ ಎಂದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin