ಮೋಟಾರ್ ದುರಸ್ತಿಗೆ ಆಗ್ರಹಿಸಿ ಗ್ರಾಪಂ ಕಚೇರಿಗೆ ಮುತ್ತಿಗೆ

ಈ ಸುದ್ದಿಯನ್ನು ಶೇರ್ ಮಾಡಿ

kr-pete-2

ಕೆಆರ್ ಪೇಟೆ, ಮೇ 5– ಕಳೆದ 20 ದಿನಗಳಿಂದ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದ್ದು, ತಕ್ಷಣ ಸಮಸ್ಯೆ ಬಗೆಹರಿಸಬೇಕೆಂದು ಒತ್ತಾಯಿಸಿ ತಾಲೂಕಿನ ಚೌಡೇನಹಳ್ಳಿ ಗ್ರಾಮಸ್ಥರು ಬಳ್ಳೇಕೆರೆ ಗ್ರಾಮ ಪಂಚಾಯಿತಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.ಚೌಡೇನಹಳ್ಳಿ ಗ್ರಾಪಂ ಸದಸ್ಯ ಹರೀಶ್ ನೇತೃತ್ವದಲ್ಲಿ ಗ್ರಾಪಂಗೆ ಮುತ್ತಿಗೆ ಹಾಕಿದ ಪ್ರತಿಭಟನಾಕಾರರು ಗ್ರಾಮದಲ್ಲಿ ಕಳೆದ 20 ದಿನಗಳ ಹಿಂದೆ ಕುಡಿಯುವ ನೀರಿನ ಮೋಟಾರ್ ಕೆಟ್ಟು ನಿಂತಿದ್ದು ದುರಸ್ತಿ ಮಾಡುವಂತೆ ಹಲವು ಬಾರಿ ಮನವಿ ಮಾಡಿದ್ದರೂ ದುರಸ್ತಿಗೆ ಮುಂದಾಗದ ಹಿನ್ನೆಲೆಯಲ್ಲಿ ಬೇಸತ್ತು ಪಿಡಿಒ ಮಲ್ಲೇಶ್ ಅವರಿಗೆ ದಿಗ್ಬಂಧನ ವಿಧಿಸಿ ಪ್ರತಿಭಟನೆ ನಡೆಸಿ ತಕ್ಷಣ ನೀರಿನ ಸಮಸ್ಯೆ ಹೋಗಲಾಡಿಸುವಂತೆ ಆಗ್ರಹಿಸಿದರು.

ನೀರಿನ ಸಮಸ್ಯೆಯ ಬಗ್ಗೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಹಾಗೂ ಅಧ್ಯಕ್ಷರಿಗೆ ಮೌಖಿಕವಾಗಿ ಮಾಹಿತಿ ನೀಡಿ ಒತ್ತಾಯ ಮಾಡಿದ್ದರೂ ಇದೂವರೆಗೂ ಮೋಟಾರ್ ದುರಸ್ತಿ ಮಾಡಿ ಕುಡಿಯುವ ನೀರು ಪೂರೈಕೆ ಮಾಡಲು ಯಾವುದೆ ಕ್ರಮ ವಹಿಸಿಲ್ಲ ಎಂದು ದೂರಿದರು.ಪ್ರತಿಭಟನಾಕಾರರ ಬೇಡಿಕೆಗೆ ಸ್ಪಂದಿಸಿದ ಪಿಡಿಒ ಮಲ್ಲೇಶ್ ಮತ್ತು ಗ್ರಾಪಂಅಧ್ಯಕ್ಷೆ ಸುಜಾತಾ ವಿಜಯಕುಮಾರ್, ಉಪಾಧ್ಯಕ್ಷೆ ಮಹೇಶ್ ಮೋಟಾರ್ ರಿಪೇರಿ ಮಾಡಿಸಿಕೊಟ್ಟು ನೀರಿನ ಸಮಸ್ಯೆ ದೂರ ಮಾಡುವ ಭರವಸೆ ನೀಡಿದ ನಂತರ ಗ್ರಾಮಸ್ಥರು ತಮ್ಮ ಧರಣಿ ಕೈಬಿಟ್ಟರು. ಪ್ರತಿಭಟನೆಯಲ್ಲಿ ಗ್ರಾಮದ ಮುಖಂಡರಾದ ರಾಮಕೃಷ್ಣೇಗೌಡ, ಸಂಜೀವೇಗೌಡ, ಕಾಂತರಾಜ್, ಜಣೇಗೌಡ, ದೇವರಾಜೇಗೌಡ, ರಮೇಶ್, ಗ್ರಾ.ಪಂ.ಸದಸ್ಯರಾದ ನಾಗೇಶ್, ತಿಮ್ಮೇಗೌಡ, ನಾಗರಾಜು, ಚನ್ನಕೇಶವ್, ಗಿರಿಜ, ಪ್ರದೀಪ್, ಲೋಕೇಶ್ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin