ಬೆಳಗಾವಿಯಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದ 7 ಬಾಂಗ್ಲಾ ಪ್ರಜೆಗಳ ಬಂಧನ

ಈ ಸುದ್ದಿಯನ್ನು ಶೇರ್ ಮಾಡಿ

3-Arrested

ಬೆಂಗಳೂರು,ಮೇ 6– ನಗರದಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದ ಓರ್ವ ಮಹಿಳೆ ಸೇರಿ ಏಳು ಮಂದಿ ಬಾಂಗ್ಲಾದೇಶದ ಪ್ರಜೆಗಳನ್ನು ಮಾಳಮಾರುತಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಯಾವುದಾದರೂ ಉಗ್ರಗಾಮಿ ಸಂಘಟನೆಗಳ ಜೊತೆ ಸಂಪರ್ಕ ಹೊಂದಿದ್ದಾರೆಯೇ ಎಂಬುದರ ಬಗ್ಗೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.  ಪುಣೆ ವಿಮಾನ ನಿಲ್ದಾಣದಲ್ಲಿ ನಕಲಿ ಪಾಸ್‍ಪೋರ್ಟ್ ಬಳಸಿ ದುಬೈಗೆ ಹೊರಟಿದ್ದ ಮಹಮ್ಮದ್ ಬೇಪಾರಿ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು, ಆತ ನೀಡಿದ ಸುಳಿವಿನ ಮೇರೆಗೆ ಬೆಳಗಾವಿಯಲ್ಲಿ ನೆಲೆಸಿದ್ದ ಮಹಿಳೆ ಸೇರಿದಂತೆ 7 ಮಂದಿಯನ್ನು ಬಂಧಿಸಿದಾರೆ.



ಅಂಜುಬೇಗ್ (32), ಹಫಿಜುಲ್ಲಾ ಇಸ್ಲಾಂ (20), ಹಕೀಬï (20), ಅಬ್ದುಲ್  ನಿಹಾರ ಅಲಿ ಗಾಜಿ (60), ಅನ್ವರ್ ಸದ್ದಾರ್ (21), ರೋಹನ್(21), ಮಹಮ್ಮದï ಅಲ್ವಿನï ಶೌಫಿವುದ್ದಿನ್ ಬೇಪಾರಿ (26) ಬಂಧಿತರು.   ಇವರು ನಕಲಿ ಪಾಸ್‍ಪೋರ್ಟ್ ಬಳಸಿ ದುಬೈಗೆ ತೆರಳಲು ಸಿದ್ಧತೆ ನಡೆಸಿದ್ದರು. ಬೇಪಾರಿ ನೀಡಿದ ಮಾಹಿತಿ ಮೇಲೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದು , ಇನ್ನು ಹಲವು ನುಸುಳುಕೋರರು ಬೀಡುಬಿಟ್ಟಿರುವ ಸಾಧ್ಯತೆ ಇದೆ ಎನ್ನಲಾಗಿದ್ದು, ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin