ಜು.1ರಿಂದ ಜಿಎಸ್‍ಟಿ ಜಾರಿ, ಸರಕು ದರದಲ್ಲಿ ಗಮನಾರ್ಹ ಹೆಚ್ಚಳವಿಲ್ಲ

ಈ ಸುದ್ದಿಯನ್ನು ಶೇರ್ ಮಾಡಿ

GST--011

ಟೊಕಿಯೋ, ಮೇ 8-ಭಾರತದ ಅತಿದೊಡ್ಡ ತೆರಿಗೆ ಸುಧಾರಣೆಯಾದ ಸರಕುಗಳು ಮತ್ತು ಸೇವೆಗಳ ತೆರಿಗೆ (ಜಿಎಸ್‍ಟಿ) ಜುಲೈ 1ರಿಂದ ಜಾರಿಗೆ ಬರಲಿದೆ ಎಂದು ಪುನರುಚ್ಚರಿಸಿರುವ ಹಣಕಾಸು ಸಚಿವ ಅರುಣ್ ಜೇಟ್ಲಿ, ಇದು ಸರಕುಗಳ ದರದಲ್ಲಿ ಯಾವುದೇ ಗಮನಾರ್ಹ ಏರಿಕೆಗೆ ಎಡೆ ಮಾಡಿಕೊಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.   ಉದಯರವಿ ನಾಡು ಜಪಾನ್ ರಾಜಧಾನಿ ಟೋಕಿಯೋದಲ್ಲಿ ಸಿಐಐ-ಕೋಟಕ್ ಹೂಡಿಕೆದಾರರ ದುಂಡು ಮೇಜಿನ ಸಭೆಯಲ್ಲಿ ಮಾತನಾಡಿದ ಅವರು, ಇದು ಸರಳೀಕೃತ ಏಕ ರೂಪದ ರಾಷ್ಟ್ರೀಯ ತೆರಿಗೆಯಾಗಿರುವುದರಿಂದ ದೇಶದಲ್ಲಿ ವಾಣಿಜ್ಯ-ವಹಿವಾಟುಗಳನ್ನು ನಡೆಸಲು ಸುಗಮವಾಗುತ್ತದೆ ಎಂದು ತಿಳಿಸಿದರು.ಸಾರ್ವಜನಿಕ ವಲಯದ ಬ್ಯಾಂಕುಗಳ ಆರ್ಥಿಕ ಸ್ಥಿತಿ ಸುಧಾರಣೆಯಾದರೆ, ಸರ್ಕಾರಿ ಸ್ವಾಮ್ಯದ ಬ್ಯಾಂಕುಗಳ ಮೇಲೆ ಕೇಂದ್ರ ಸರ್ಕಾರ ಹೊಂದಿರುವ ಪಾಲನ್ನು ಶೇ.52ಕ್ಕೆ ಇಳಿಸುವುದಾಗಿ ಅವರು ಹೇಳಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin