ಸಿಎಂ ಮಂಡ್ಯಕ್ಕೆ ಆಗಮನ : ಮುನ್ನೆಚ್ಚರಿಕೆ ಕ್ರಮವಾಗಿ  ಇಬ್ಬರು ಪೊಲೀಸರ ವಶಕ್ಕೆ

ಈ ಸುದ್ದಿಯನ್ನು ಶೇರ್ ಮಾಡಿ

cm
ಮಂಡ್ಯ, ಮೇ 8- ಮುಖ್ಯಮಂತ್ರಿ ಆಗಮನದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಬಿಜೆಪಿ ಕಾರ್ಯಕರ್ತ ಶಿವಕುಮಾರ್ ಆರಾಧ್ಯ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ತಿರುಮಲಪುರ ಗ್ರಾಮದ ದೇವಸ್ಥಾನದ ಉದ್ಘಾಟನೆಗೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಆಗಮಿಸುತ್ತಿದ್ದು, ಈ ವೇಳೆ ಶಿವಕುಮಾರ್ ಪ್ರತಿಭಟನೆ ನಡೆಸುತ್ತಾರೆ ಎಂಬ ಮಾಹಿತಿ ಬಂದ ಹಿನ್ನೆಲೆಯಲ್ಲಿ ಪಶ್ಚಿಮ ಠಾಣೆ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ.  ಮಳವಳ್ಳಿಯಲ್ಲಿ ನಡೆದ ಕಾರ್ಯಕ್ರಮದ ವೇಳೆ ನಡೆದಿದ್ದ ಘಟನೆ ಮರುಕಳಿಸದಂತೆ ಎಚ್ಚರಿಕೆ ವಹಿಸಲಾಗಿದ್ದು, ಅಂದು ಕೋಟ್ಯಂತರ ರೂ. ವೆಚ್ಚದ ಕಾಮಗಾರಿ ಉದ್ಘಾಟನೆಗೆ ಸಿಎಂ ಆಗಮಿಸಿದಾಗ ಕಾರಿಗೆ ಅಡ್ಡಲಾಗಿ ನುಗ್ಗಿ ಬಿಜೆಪಿ ಕಾರ್ಯಕರ್ತರು ಪ್ರತಿಭಟಿಸಿದ್ದರು. ಈ ಸಂಬಂಧ ಜಿಲ್ಲಾ ಎಸ್‍ಪಿ ಸುಧೀರ್‍ಕುಮಾರ್ ರೆಡ್ಡಿ ಅವರನ್ನ ಸಿಎಂ ತರಾಟೆಗೆ ತೆಗೆದುಕೊಂಡಿದ್ದರು.



ದಸಂಸ ಮುಖಂಡ ವಶ:
ಮುಖ್ಯಮಂತ್ರಿ ಎದುರು ಪ್ರತಿಭಟನೆಗೆ ಸಜ್ಜಾಗಿದ್ದ ದಸಂಸ ಮುಖಂಡ ವೆಂಕಟಗಿರಿಯಯ್ಯ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin