ಎಚ್.ವಿಶ್ವನಾಥ್ ಅವರ ಪತ್ರದ ವಿಚಾರ ನನಗೆ ತಿಳಿದಿಲ್ಲ :ಪರಮೇಶ್ವರ್
ಬೆಂಗಳೂರು, ಮೇ 9- ಕಾಂಗ್ರೆಸ್ ಹಿರಿಯ ಮುಖಂಡ ಎಚ್.ವಿಶ್ವನಾಥ್ ಅವರು ವೇಣುಗೋಪಾಲ್ ಅವರಿಗೆ ಪತ್ರ ಬರೆದಿರುವ ವಿಚಾರ ನನಗೆ ತಿಳಿದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ಹೇಳಿದರು. ಅವರನ್ನು ಇಂದು ಭೇಟಿ ಮಾಡಲು ಕುಮಾರಕೃಪಾಕ್ಕೆ ಆಗಮಿಸಿದ ಸಂದರ್ಭದಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಪತ್ರದ ವಿಚಾರ ನನಗೆ ಗೊತ್ತಿಲ್ಲ. ಆ ಪತ್ರ ನಾನು ನೋಡಿಲ್ಲ ಎಂದರು.
ವಿಶ್ವನಾಥ್ ಅವರು ಕಾಂಗ್ರೆಸ್ನ ಹಿರಿಯ ಮುಖಂಡರು. ಅವರಿಗೆ ಪಕ್ಷ ಬಿಡದಂತೆ ಮನವಿ ಮಾಡಿದ್ದೇವೆ. ಪಕ್ಷದ ವಿಚಾರಗಳ ಬಗ್ಗೆ ಚರ್ಚಿಸಲೆಂದೇ ಪಕ್ಷದ ಉಸ್ತುವಾರಿಯಾಗಿ ನೂತನವಾಗಿ ನೇಮಕವಾಗಿರುವ ವೇಣುಗೋಪಾಲ್ ಅವರು ಆಗಮಿಸಿದ್ದಾರೆ. ಅವರು ಈ ಬಗ್ಗೆ ಚರ್ಚೆ ನಡೆಸುತ್ತಾರೆ ಎಂದು ಹೇಳಿದರು. ಮೇ 22ರಂದು ನಾನು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪಕ್ಷದ ವಿಚಾರಗಳ ಬಗ್ಗೆ ಚರ್ಚಿಸುತ್ತೇವೆ ಎಂದು ಪರಮೇಶ್ವರ್ ತಿಳಿಸಿದರು.
< Eesanje News 24/7 ನ್ಯೂಸ್ ಆ್ಯಪ್ >
Click Here to Download : Android / iOS
Facebook Comments