ಎಚ್.ವಿಶ್ವನಾಥ್ ಅವರು ಪಕ್ಷ ಬಿಡುವುದಿಲ್ಲ ಪಕ್ಷ ಬಿಡಲ್ಲ : ಎಚ್.ಸಿ.ಮಹದೇವಪ್ಪ

ಈ ಸುದ್ದಿಯನ್ನು ಶೇರ್ ಮಾಡಿ

Hc-mahadevappa

ಬೆಂಗಳೂರು, ಮೇ 9-ಮಾಜಿ ಸಂಸದ, ಕಾಂಗ್ರೆಸ್ ಹಿರಿಯ ಮುಖಂಡ ಎಚ್.ವಿಶ್ವನಾಥ್ ಅವರು ಪಕ್ಷ ಬಿಡುವುದಿಲ್ಲ ಎಂದು ಲೋಕೋಪಯೋಗಿ ಸಚಿವ ಎಚ್.ಸಿ.ಮಹದೇವಪ್ಪ ಇಂದಿಲ್ಲಿ ಹೇಳಿದರು.  ಪಕ್ಷದ ಉಸ್ತುವಾರಿಯಾಗಿ ನೂತನವಾಗಿ ನೇಮಕಗೊಂಡು ಬೆಂಗಳೂರಿಗೆ ಆಗಮಿಸಿರುವ ಕೆ.ಸಿ.ವೇಣುಗೋಪಾಲ್ ಅವರನ್ನು ಭೇಟಿ ಮಾಡಿ ಚರ್ಚಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಶ್ವನಾಥ್ ಅವರು ಕಾಂಗ್ರೆಸ್‍ನ ಹಿರಿಯ ನಾಯಕರು. ಅವರು ಪಕ್ಷ ತೊರೆಯುವುದಿಲ್ಲ ಎಂದು ಹೇಳಿದರು.  ಅವರು ಪಕ್ಷ ಬಿಡುವುದಿಲ್ಲ ಎಂದಾದರೆ ಮಧ್ಯಸ್ಥಿಕೆ ವಹಿಸುವ ಅಗತ್ಯವೇ ಬರುವುದಿಲ್ಲ ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಬದಲಾಗಿಲ್ಲ. ಅವರು ಮೊದಲು ಹೇಗಿದ್ದರೋ, ಹಾಗೇ ಇದ್ದಾರೆ ಎಂದು ಮಹದೇವಪ್ಪ ಹೇಳಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin