ನೀರಿನ ಸಮಸ್ಯೆ: 25 ಕೋಟಿ ರೂ. ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ರೇವಣ್ಣ ಆಗ್ರಹ

ಈ ಸುದ್ದಿಯನ್ನು ಶೇರ್ ಮಾಡಿ

Revanna--JDS

ಬೆಂಗಳೂರು,ಮೇ 9- ಹಾಸನ ಜಿಲ್ಲೆಯ ಒಂದು ಸಾವಿರ ಹಳ್ಳಿ ಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರ ಗೊಂಡಿದ್ದು , ಶೀಘ್ರ 25 ಕೋಟಿ ರೂ. ಬಿಡುಗಡೆ ಮಾಡಬೇಕೆಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಒತ್ತಾಯಿಸಿದರು.  ಸುದ್ದಿಗಾರರೊಂದಿಗೆ ಮಾತ ನಾಡಿದ ಅವರು, ಕಳೆದ ಎರಡು ವರ್ಷಗಳಿಂದ ಹಾಸನ ಜಿಲ್ಲೆಯ ಏಳು ತಾಲ್ಲೂಕುಗಳೂ ಬರಪೀಡಿತವಾಗಿದ್ದು, ಕುಡಿಯುವ ನೀರು,  ಜಾನುವಾರು ಮೇವಿಗೆ ತೊಂದರೆಯಾಗಿದೆ. ಇದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅವರ ಗಮನಕ್ಕೂ ತರಲಾಗಿದೆ.  ಜಿಲ್ಲೆಯಲ್ಲಿ ಬೆಳೆ ಬೆಳೆಯು ವುದಿರಲಿ ಕುಡಿಯುವ ನೀರು ಸಿಕ್ಕರೂ ಸಾಕು ಎಂಬ ಪರಿಸ್ಥಿತಿ ನಿರ್ಮಾಣವಾಗಿದ್ದು, ಜಿಲ್ಲೆಯ ಜನರು ಸಂಕಷ್ಟದಲ್ಲಿ ಸಿಲುಕಿದ್ದಾರೆ. ಹೇಮಾವತಿ ಜಲಾಶಯದಿಂದ 22 ಟಿಎಂಸಿ ಅಡಿ ನೀರು ಬಿಡಲಾಗಿದೆ.  ಜಿಲ್ಲೆಯಲ್ಲಿ ಉಂಟಾಗಿರುವ ಕುಡಿಯುವ ನೀರಿನ ದಾಹವನ್ನು ನೀಗಿಸಲು ತುರ್ತಾಗಿ 25 ಕೋಟಿ ರೂ. ಬಿಡುಗಡೆ ಮಾಡಬೇಕೆಂದು ಆಗ್ರಹಿಸಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin