ಮುಂದಿನ ಚುನಾವಣೆಯಲ್ಲಿ ಗದಗ ಕ್ಷೇತ್ರದಿಂದ ಗಣಿಧಣಿ ರೆಡ್ಡಿ ಸ್ಪರ್ಧೆ..?

ಈ ಸುದ್ದಿಯನ್ನು ಶೇರ್ ಮಾಡಿ

Janardhan-Reddy

ಗದಗ, ಮೇ 9- ಮುಂದಿನ ಚುನಾವಣೆ ವೇಳೆಗೆ ಸಕ್ರಿಯ ರಾಜಕಾರಣಕ್ಕೆ ಮರಳುವ ಬಗ್ಗೆ ಗಣಿ ಧಣಿ ಗಾಲಿ ಜನಾರ್ದನ ರೆಡ್ಡಿ ಇಂಗಿತ ವ್ಯಕ್ತಪಡಿಸಿದ್ದಾರೆ. ಗದಗಕ್ಕೆ ಭೇಟಿ ನೀಡಿದ ಅವರು, ಸುದ್ದಿಗಾರರೊಂದಿಗೆ ಮಾತನಾಡಿ, ಮುಂದಿನ ಚುನಾವಣೆಯಲ್ಲಿ ಬಿಜೆಪಿ 150ಕ್ಕೂ ಹೆಚ್ಚು ಸ್ಥಾನವನ್ನು ಗಳಿಸಲಿದೆ. ಯಡಿಯೂರಪ್ಪ ಮುಖ್ಯಮಂತ್ರಿಯಾಗುತ್ತಾರೆ ಎಂದು ಹೇಳಿದರು. ಈ ವೇಳೆ ತಾವು ಗದಗ ಕ್ಷೇತ್ರದಿಂದಲೇ ಕಣಕ್ಕಿಳಿಯುತ್ತೀರಾ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಸಾಮಾನ್ಯ ಕಾರ್ಯಕರ್ತ.



ಹೈಕಮಾಂಡ್ ಏನು ತೀರ್ಮಾನ ಕೈಗೊಳ್ಳುತ್ತದೆಯೋ ಅದಕ್ಕೆ ನಾನು ಬದ್ಧವಾಗಿದ್ದೇನೆ ಎಂದು ಮಾರ್ಮಿಕವಾಗಿ ತಾವು ಚುನಾವಣೆಗೆ ಅಣಿಯಾಗುತ್ತಿರುವ ಬಗ್ಗೆ ಸುಳಿವು ನೀಡಿದ್ದಾರೆ. ಪ್ರಸ್ತುತ ಪಕ್ಷದಲ್ಲಿ ಎದ್ದಿದ್ದ ಸಣ್ಣಪುಟ್ಟ ಗೊಂದಲಗಳು ನಿವಾರಣೆಯಾಗಿವೆ. ಎಲ್ಲರೂ ಒಗ್ಗಟ್ಟಾಗಿ ಮುಂದಿನ ಚುನಾವಣೆಯನ್ನು ಎದುರಿಸಿ ಪಕ್ಷವನ್ನು ಅಧಿಕಾರಕ್ಕೆ ತರಲು ದುಡಿಯುವುದಾಗಿ ತಿಳಿಸಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin