ಜಮೀನು ಮಾರುವ ವಿಚಾರದಲ್ಲಿ ಜಗಳ : ಪತ್ನಿಯನ್ನು ಕೊಚ್ಚಿ ಕೊಂದ ಪತಿ

ಈ ಸುದ್ದಿಯನ್ನು ಶೇರ್ ಮಾಡಿ

Wife-Murder

ಕೊಪ್ಪಳ, ಮೇ 10-ಜಮೀನು ಮಾರಾಟ ಸಂಬಂಧ ದಂಪತಿ ನಡುವೆ ನಡೆದ ಜಗಳ ಪತ್ನಿ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ಯಲಬುರ್ಗಾ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಚಿಕ್ಕಮ್ಯಾಗೇರಿ ಗ್ರಾಮದ ಗಿರಿಜಮ್ಮ (36) ಕೊಲೆಯಾದ ಮಹಿಳೆ. ಜಮೀನು ಮಾರಾಟ ಸಂಬಂಧ ಗಿರಿಜಮ್ಮ ಹಾಗೂ ಪತಿ ಬಾಲಪ್ಪ ಕುಂಟ್ರು ನಡುವೆ ಬೆಳ್ಳಂಬೆಳಗ್ಗೆಯೇ ಜಗಳವಾಗಿದೆ.
ಜಗಳ ವಿಕೋಪಕ್ಕೆ ತಿರುಗಿದ್ದು, ಬಾಲಪ್ಪ ಕೊಡಲಿಯಿಂದ ಪತ್ನಿಯನ್ನು ಕೊಚ್ಚಿ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಯಲಬುರ್ಗಾ ಠಾಣೆ ಪೊಲೀಸರು ಪರಿಶೀಲನೆ ನಡೆಸಿ ಆರೋಪಿ ಪತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin