ನಾಳೆ ಪಿಯುಸಿ, ನಾಡಿದ್ದು ಎಸ್ಸೆಸ್ಸೆಲ್ಸಿ ಫಲಿತಾಂಶ

ಈ ಸುದ್ದಿಯನ್ನು ಶೇರ್ ಮಾಡಿ

PuC-Result

ಬೆಂಗಳೂರು,ಮೇ 10- ವಿದ್ಯಾರ್ಥಿ ಜೀವನದ ಎರಡನೇ ಮಹತ್ವದ ಮೈಲಿಗಲ್ಲು ಎನಿಸಿದ 2016- 2017ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ನಾಳೆ ಪ್ರಕಟವಾಗಲಿದೆ.  ನಾಳೆ ಮಧ್ಯಾಹ್ನ 3ಗಂಟೆಗೆ ದ್ವಿತೀಯ ಪಿಯುಸಿ ಫಲಿತಾಂಶ ಇಲಾಖೆಯ ಅಧಿಕೃತ ವೆಬ್ಸೈಟ್ ನಲ್ಲಿ ಪ್ರಕಟಿಸಲಾಗುವುದು ಮತ್ತು ಮೇ 12 ರಂದು ಆಯಾ ಕಾಲೇಜುಗಳಲ್ಲಿ ಫಲಿತಾಂಶ ಲಭ್ಯವಾಗಲಿದೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ ಸಿ ಶಿಖಾ ತಿಳಿಸಿದ್ದಾರೆ. ಕಳೆದ ಮಾರ್ಚ್ 9ರಿಂದ 27 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸಲಾಗಿತ್ತು.  ಈ ವರ್ಷ 6,84,490 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿದ್ದು, ಈ ಪೈಕಿ 3,48,562 ವಿದ್ಯಾರ್ಥಿಗಳು ಹಾಗೂ 3,35,909 ವಿದ್ಯಾರ್ಥಿನಿಯರು ಪರೀಕ್ಷೆ ಬರೆದಿದ್ದರು.

ಏಪ್ರಿಲ್ 5 ರಿಂದ ರಾಜ್ಯಾದ್ಯಂತ 48 ಕೇಂದ್ರಗಳಲ್ಲಿ ಮೌಲ್ಯಮಾಪನ ಕಾರ್ಯ ಆರಂಭವಾಗಿತ್ತು. ಸುಮಾರು 37 ಲಕ್ಷ ಉತ್ತರ ಪತ್ರಿಕೆಗಳ ಮೌಲ್ಯಮಾಪನ ನಡೆದಿದ್ದು 21 ಸಾವಿರ ಉಪನ್ಯಾಸಕರು ಮೌಲ್ಯಮಾಪನದಲ್ಲಿ ಭಾಗಿಯಾಗಿದ್ದರು.  ಈ ವರ್ಷ ಭಾರೀ ಭದ್ರತೆಯೊಂದಿಗೆ ಪರೀಕ್ಷೆ ನಡೆಸಿತ್ತು. ಕರ್ನಾಟಕ ಸೆಕ್ಯೂರ್ ಎಕ್ಸಾಂಮೀನೇಷನ್ ಸಿಸ್ಟಮ್ ಪ್ರೊ  ಅಳವಡಿಸಿಕೊಂಡಿದ್ದು, ಜಿಲ್ಲಾ ಖಜಾನೆಗಳಿಗೆ ಸಿಸಿಟಿವಿ, ಮ್ಯಾಗ್ನೆಟಿಕ್ ಡೋರ್ಗಳು, ಬಯೋ ಮೆಟ್ರಿಕ್ ಪದ್ಧತಿ ಸೇರಿದಂತೆ ಇನ್ನಿತರ ಹೈ ಸೆಕ್ಯುರಿಟಿ ಸಿಸ್ಟಮ್  ಅಳವಡಿಕೆ ಮಾಡಲಾಗಿತ್ತು.


 

ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟ :
ಈ ಬಾರಿಯ ಎಸ್‍ಎಸ್‍ಎಲ್ಸಿ ಪರೀಕ್ಷೆ ಫಲಿತಾಂಶವು ಶುಕ್ರವಾರ ಪ್ರಕಟವಾಗಲಿದೆ. ಎಸ್‍ಎಸ್‍ಎಲïಸಿ ಫಲಿತಾಂಶದ ಕ್ರೊಢೀಕರಣ ಮುಗಿದಿದ್ದು ವೆಬ್‍ಸೈಟ್ ನಲ್ಲಿ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ತನ್ವೀರ್  ಸೇಠ್ ಟ್ವೀಟ್ ಮೂಲಕ ತಿಳಿಸಿದ್ದಾರೆ. ಮಾರ್ಚ್ 30ರಿಂದ ಏಪ್ರಿ ಲ್  12ರವರೆಗೂ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ನಡೆದಿದ್ದು, ಏಪ್ರಿ ಲ್   20 ರಿಂದ ಮೌಲ್ಯಮಾಪನ ಆರಂಭವಾಗಿತ್ತು.

ಈ ಬಾರಿಯ ಎಸ್‍ಎಸ್‍ಎಲ್ ಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನಕ್ಕೆ ರಾಜ್ಯದ 225 ಕಡೆ ಮೌಲ್ಯಮಾಪನ ಕೇಂದ್ರಗಳನ್ನು ನಿಗದಿಪಡಿಸಲಾಗಿತ್ತು, 33 ಶೈಕ್ಷಣಿಕ ಜಿಲ್ಲೆಗಳಲ್ಲಿ ಪ್ರತಿ ವಿಷಯಕ್ಕೆ ಒಂದು ಮೌಲ್ಯಮಾಪನ ಕೇಂದ್ರವನ್ನು ನಿಗದಿಪಡಿಸುವ ಮೂಲಕ ವೇಗವಾಗಿ ಮೌಲ್ಯಮಾಪನ ಕ್ರಿಯೆ ನಡೆಸಲಾಗಿತ್ತು. ಫಲಿತಾಂಶವನ್ನು ಬೇಗ ನೀಡುವ ಉದ್ದೇಶದಿಂದ ಹೆಚ್ಚಿನ ಶಿಕ್ಷಕರನ್ನು ಮೌಲ್ಯಮಾಪನಕ್ಕೆ ಬಳಸಿಕೊಳ್ಳಲಾಗಿದ್ದು, ಇದಕ್ಕಾಗಿ 68,567 ಶಿಕ್ಷಕರನ್ನು ಆಯ್ಕೆ ಮಾಡಲಾಗಿತ್ತು, ಒಟ್ಟು 2770 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿದ್ದು, ಈ ಬಾರಿ 8.77 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಅವರಲ್ಲಿ 4.69 ಲಕ್ಷ ಬಾಲಕರು ಹಾಗೂ 4.07 ಲಕ್ಷ ಬಾಲಕಿಯರಿದ್ದಾರೆ.

 

ಸಿದ್ದತೆ ಪೂರ್ಣ :

ಪರೀಕ್ಷೆ ಬರೆದ ಎಲ್ಲಾ ವಿದ್ಯಾರ್ಥಿಗಳ ವಿಷಯವಾರು ಅಂಕ, ಒಟ್ಟು ಅಂಕ, ಹಾಗೂ ಶ್ರೇಣಿ ಇತ್ಯಾದಿ ಎಲ್ಲವನ್ನು ಕ್ರೋಢೀಕರಿಸಿ ವೆಬ್‍ಸೈಟ್‍ನಲ್ಲಿ ಪ್ರೊ ಮಾಡುವ ಕಾರ್ಯ ನಡೆಯುತ್ತಿದೆ. ಸರ್ಕಾರದ ಅಧಿಕೃತ ವೆಬ್‍ಸೈಟ್ ಹೊರತುಡಿಸಿ ಬೇರೇ ಯಾವ ಖಾಸಗಿ ವೆಬ್‍ಸೈಟ್‍ನಲ್ಲೂ ಫಲಿತಾಂಶ ಪ್ರಕಟಿಸದಂತೆ ನಿಯಮ ರೂಪಿಸಲಾಗಿದೆ.  ವಿದ್ಯಾರ್ಥಿಗಳು ಪಡೆದ ಅಂಕದ ಮಾಹಿತಿ ವೆಬ್‍ಸೈಟ್‍ನಲ್ಲಿ ಅಪ್ರೋ ಮಾಡುವಾಗ ಕಣ್ತಪ್ಪಿನಿಂದಲೂ ಸಣ್ಣಪುಟ್ಟ ವ್ಯತ್ಯಾಸ ಆದಂತೆ ಎಚ್ಚರ ವಹಿಸಬೇಕಾಗುತ್ತದೆ. ಅಲ್ಲದೇ, ಫಲಿತಾಂಶದ ನಂತರ ಉತ್ತರ ಪತ್ರಿಕೆಯ ಫೋಟೋ ಕಾಪಿ ಇತ್ಯಾದಿಗೆ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುತ್ತಾರೆ. ಅದಕ್ಕೆ ಬೇಕಾದ ಸಿದ್ಧತೆಯನ್ನು ಮಾಡಿಕೊಳ್ಳಬೇಕಾಗುತ್ತದೆ. ಫಲಿತಾಂಶಕ್ಕಾಗಿ ಹೊಸ ಸಾಫ್ಟ್ ವೇರ್ ಸಿದ್ಧಪಡಿಸಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

 

Facebook Comments

Sri Raghav

Admin