ಪೋಖ್ರಾನ್ ಅಣ್ವಸ್ತ್ರ ಪರೀಕ್ಷೆ ವರ್ಷಾಚರಣೆ : ವಾಜಪೇಯಿ ದಿಟ್ಟತನಕ್ಕೆ ಮೋದಿ ಪ್ರಶಂಸೆ

ಈ ಸುದ್ದಿಯನ್ನು ಶೇರ್ ಮಾಡಿ

Pokhran-01

ನವದೆಹಲಿ, ಮೇ 11-ಭಾರತದ ಅಗಾಧ ಸಾಮಥ್ರ್ಯವನ್ನು ವಿಶ್ವಕ್ಕೆ ಮನವರಿಕೆ ಮಾಡಿಕೊಟ್ಟ ಪೋಖ್ರಾನ್ ಅಣ್ವಸ್ತ್ರ ಪರೀಕ್ಷೆಗೆ ಇಂದು ವರ್ಷಾಚರಣೆ. 1998ರ ಈ ಸಾಧನೆ ರಾಷ್ಟ್ರೀಯ ತಂತ್ರಜ್ಞಾನ ದಿನವನ್ನಾಗಿ ಆಚರಿಸಲಾಗುತ್ತದೆ. ಈ ಪ್ರಯೋಗದ ರೂವಾರಿ ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಅವರ ದಿಟ್ಟತನ ಮತ್ತು ಧೈರ್ಯವನ್ನು ಪ್ರಧಾನಿ ನರೇಂದ್ರ ಮೋದಿ ಪ್ರಶಂಸಿಸಿದ್ದಾರೆ.



ರಾಷ್ಟ್ರೀಯ ತಂತ್ರಜ್ಞಾನ ಸಂದರ್ಭದಲ್ಲಿ ದೇಶದ ಜನರಿಗೆ ಅದರಲ್ಲೂ ಕೈಗಾರಿಕಾ ವಿಜ್ಞಾನಿಗಳು ಮತ್ತು ತಂತ್ರಜ್ಞಾನ ಪರಿಣಿತರಿಗೆ ನಾನು ಶುಭ ಕೋರುತ್ತೇನೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

ಪೋಖ್ರಾನ್‍ನಲ್ಲಿ 1998ರಲ್ಲಿ ನಡೆದ ಅಣ್ವಸ್ತ್ರ ಪರೀಕ್ಷೆಗೆ ಸಹಕಾರ ನೀಡಿದ ಎಲ್ಲರನ್ನೂ ನಾನು ಈ ಸಂದರ್ಭದಲ್ಲಿ ಅಭಿನಂದಿಸುತ್ತೇನೆ ಎಂದು ಅವರು ಹೇಳಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin