ಅಡ್ಡಗಟ್ಟಿದ ಪೊಲೀಸರ ಮೇಲೆಯೇ ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದ ವಾಹನ ಹರಿಸಲು ಯತ್ನ

ಈ ಸುದ್ದಿಯನ್ನು ಶೇರ್ ಮಾಡಿ

TT-asfaf

ಕೊಡಗು,ಮೇ 13– ಅಕ್ರಮವಾಗಿ ಜಾನುವಾರು ಸಾಗಣೆ ಮಾಡುತ್ತಿದ್ದ ಟಿಟಿ ವಾಹನವನ್ನು ಬೆನ್ನತ್ತಿ ಅಡ್ಡಗಟ್ಟಿದ ಪೊಲೀಸರ ಮೇಲೆ ವಾಹನ ಹರಿಸಲು ಯತ್ನಿಸಿದ ಘಟನೆ ಕೊಡ್ಲಿಪೇಟೆಯಲ್ಲಿ ನಡೆದಿದೆ. ಬೆನ್ನತ್ತಿ ಬಂದ ಪೊಲೀಸರ ಬೈಕ್‍ನ್ನು ಜಖಂಗೊಳಿಸಿ ಪೊಲೀಸರ ಮೇಲೆ ಹಲ್ಲೆ ನಡೆಸಿದ ಘಟನೆಯಿಂದ ರೊಚ್ಚಿಗೆದ್ದ ಸ್ಥಳೀಯರು ಟಿಟಿ ವಾಹನಕ್ಕೆ ಬೆಂಕಿ ಹಚ್ಚಿದ್ದಾರೆ.  ಮಂಗಳೂರಿನ ಮನ್ಸೂರ್ ಮತ್ತು ಷರೀಫ್ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. ತೊರೆನೂರಿನಿಂದ 20 ಕಿ.ಮೀ ದೂರದವರೆಗೆ ಪೊಲೀಸರು ಟಿಟಿ ವಾಹನವನ್ನು ಬೆನ್ನತ್ತಿ ಬಂದು ಕೊಡ್ಲಿಪೇಟೆಯಲ್ಲಿ ಅಡ್ಡಗಟ್ಟಿದ್ದಾರೆ.



ಈ ವೇಳೆ ಆರೋಪಿಗಳು ಪೊಲೀಸರ ಮೇಲೆ ಟಿಟಿ ವಾಹನ ಹರಿಸಲು ಯತ್ನಿಸಿ ಬೈಕ್ ಜಖಂಗೊಳಿಸಿದ್ದಾರೆ.  ನಂತರ ವಾಹನದಿಂದ ಇಳಿದ ಆರೋಪಿಗಳು ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ. ಅಷ್ಟರಲ್ಲಿ ಸ್ಥಳೀಯರು ನೆರವಿಗೆ ಧಾವಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಅಲ್ಲದೆ ರೊಚ್ಚೆಗೆದ್ದ ಸ್ಥಳೀಯರು ಟಿಟಿ ವಾಹನಕ್ಕೆ ಬೆಂಕಿ ಹಚ್ಚಿದ್ದಾರೆ. ಈ ಸಂಬಂಧ ಶನಿವಾರ ಸಂತೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಧಿತರಿಂದ ಎರಡು ವಾಹನ, 8 ಜಾನುವಾರುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin