ನಾಗ ಮತ್ತು ಆತನ ಮಕ್ಕಳ ಪ್ರತ್ಯೇಕ ವಿಚಾರಣೆ

ಈ ಸುದ್ದಿಯನ್ನು ಶೇರ್ ಮಾಡಿ

Bomb-Naga-01

ಬೆಂಗಳೂರು, ಮೇ 13– ಬ್ಲ್ಯಾಕ್ ಅಂಡ್ ವೈಟ್ ದಂಧೆ ಪ್ರಕರಣದಲ್ಲಿ ಬಂಧಿತರಾಗಿರುವ ಪಾಲಿಕೆ ಮಾಜಿ ಸದಸ್ಯ ವಿ.ನಾಗರಾಜ್ ಮತ್ತು ಆತನ ಮಕ್ಕಳಾದ ಗಾಂಧಿ, ಶಾಸ್ತ್ರಿಯನ್ನು ಪ್ರತ್ಯೇಕವಾಗಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಗೌಪ್ಯ ಸ್ಥಳದಲ್ಲಿ ಮೂವರನ್ನು ವಿಚಾರಣೆ ನಡೆಸುತ್ತಿರುವ ಪೊಲೀಸರು ನಾಗರಾಜ್ ಹೇಳಿಕೆಗೂ, ಮಕ್ಕಳ ಹೇಳಿಕೆಗೂ ಹೊಂದಾಣಿಕೆ ಇದೆಯೆ ಎಂಬುದನ್ನು ಪರಿಶೀಲಿಸುತ್ತಿದ್ದಾರೆ. ಅಲ್ಲದೆ, ಹೇಳಿಕೆಗಳ ಸತ್ಯಾಸತ್ಯತೆಯನ್ನು ಪರಿಶೀಲಿಸಲಾಗುತ್ತಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ನಿನ್ನೆ 11ನೆ ಎಸಿಎಂಎಂ ಕೋರ್ಟ್‍ಗೆ ನಾಗರಾಜು ಹಾಗೂ ಆತನ ಇಬ್ಬರು ಮಕ್ಕಳನ್ನು ಹಾಜರುಪಡಿಸಿದ್ದು, ನ್ಯಾಯಾಲಯ 11 ದಿನಗಳ ಕಾಲ ಅವರನ್ನು ಪೊಲೀಸ್ ವಶಕ್ಕೆ ನೀಡಿದೆ.



ಕಳೆದ ಒಂದು ತಿಂಗಳಿನಿಂದ ತಲೆಮರೆಸಿಕೊಂಡಿದ್ದ ನಾಗ ಹಾಗೂ ಆತನ ಮಕ್ಕಳ ಬಂಧನಕ್ಕಾಗಿ ಪೊಲೀಸರ 14 ತಂಡ ಆಂಧ್ರ ಪ್ರದೇಶ, ಕೇರಳ, ತಮಿಳುನಾಡಿನಲ್ಲಿ ಕಾರ್ಯಾಚರಣೆ ನಡೆಸಿದ್ದವು. ಕಾರನ್ನೆ ಮನೆ ಮಾಡಿಕೊಂಡು ಸುತ್ತುತ್ತಿದ್ದ ಅಪ್ಪ-ಮಕ್ಕಳು ಪೊಲೀಸರಿಂದ ತಪ್ಪಿಸಿಕೊಳ್ಳಲು 20 ಸಿಮ್, 20 ಮೊಬೈಲ್‍ಗಳನ್ನು ಬಳಸಿದ್ದರು ಎಂದು ತನಿಖೆಯಿಂದ ಗೊತ್ತಾಗಿದೆ.

Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin