ಮೈಸೂರು ಪ್ರವಾಸಿ ತಾಣಗಳಿಗೆ ಸಿಂಗಲ್ ಎಂಟ್ರಿ ಸ್ಮಾರ್ಟ್ ಕಾರ್ಡ್ ವ್ಯವಸ್ಥೆ, ದೇಶದಲ್ಲೇ ಇದೆ ಮೊದಲು

ಈ ಸುದ್ದಿಯನ್ನು ಶೇರ್ ಮಾಡಿ

Mysuru-Places

ಮೈಸೂರು, ಮೇ 13- ನಗರದ ಪ್ರವಾಸಿ ತಾಣಗಳಿಗೆ ಸಿಂಗಲ್ ಎಂಟ್ರಿ ಸ್ಮಾರ್ಟ್ ಕಾರ್ಡ್ ಮೂಲಕ ಪ್ರವೇಶ ಕಲ್ಪಿಸುವ ಪ್ರವಾಸಿ ಸ್ನೇಹಿ ವ್ಯವಸ್ಥೆಯನ್ನು ಭಾರತದಲ್ಲೇ ಪ್ರಪ್ರಥಮ ಬಾರಿಗೆ ಸಾಂಸ್ಕøತಿಕ ನಗರಿ ಮೈಸೂರಿನಲ್ಲಿ ಜಾರಿಗೆ ತರಲು ರಾಜ್ಯ ಪ್ರವಾಸೋದ್ಯಮ ಇಲಾಖೆ ಮುಂದಾಗಿದೆ.  ಆನ್‍ಲೈನ್ ಮೂಲಕ ಟಿಕೆಟ್ ಬುಕ್ ಮಾಡುವ ವ್ಯವಸ್ಥೆಯಿದ್ದರೂ ಪ್ರತಿಯೊಂದು ಸ್ಥಳಗಳಿಗೆ ಪ್ರತ್ಯೇಕ ಟಿಕೆಟ್ ಬುಕ್ ಮಾಡಬೇಕಾಗಿತ್ತು. ಹಾಗಾಗಿ ಇಂತಹ ಕಿರಿಕಿರಿ ತಪ್ಪಿಸುವ ನಿಟ್ಟಿನಲ್ಲಿ ಇಲಾಖೆ ಮುಂದಾಗಿದೆ.


ಮೈಸೂರಿನ ಅರಮನೆ, ಶ್ರೀ ಚಾಮರಾಜೇಂದ್ರ ಮೃಗಾಲಯ, ಕಾರಂಜಿಕೆರೆ ಹಾಗೂ ಚಾಮುಂಡಿ ಬೆಟ್ಟಕ್ಕೆ ಈ ಪ್ರವಾಸಿ ಸ್ನೇಹಿ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಇಲಾಖೆ ತಿಳಿಸಿದೆ. ಮೊದಲ ಹಂತದಲ್ಲಿ ಈ ವ್ಯವಸ್ಥೆ ಜಾರಿಗೆ ತಂದು ಮುಂಬರುವ ದಿನಗಳಲ್ಲಿ ಇನ್ನಿತರ ಪ್ರವಾಸಿ ತಾಣಗಳಿಗೆ ಈ ವ್ಯವಸ್ಥೆ ಕಲ್ಪಿಸಲಾಗುವುದು. ಇದರಿಂದ ಪ್ರವಾಸಿಗರಿಗೆ ಅನುಕೂಲವಾಗಲಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin