ಸಿದ್ಧಗಂಗಾ ಶ್ರೀಗಳಿಗೆ ಅನಾರೋಗ್ಯ, ಭಕ್ತರಲ್ಲಿ ಆತಂಕ

ಈ ಸುದ್ದಿಯನ್ನು ಶೇರ್ ಮಾಡಿ
 ಅನಾರೋಗ್ಯದ ಹಿನ್ನೆಲೆಯಲ್ಲಿ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತುಮಕೂರು ಸಿದ್ದಗಂಗಾ ಮಠದ ಶ್ರೀ ಶಿವಕುಮಾರ್ ಸ್ವಾಮೀಜಿ ಯವರನ್ನು  ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು  ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ಅನಾರೋಗ್ಯದ ಹಿನ್ನೆಲೆಯಲ್ಲಿ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತುಮಕೂರು ಸಿದ್ದಗಂಗಾ ಮಠದ ಶ್ರೀ ಶಿವಕುಮಾರ್ ಸ್ವಾಮೀಜಿ ಯವರನ್ನು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

ತುಮಕೂರು, ಮೇ 13- ಸಿದ್ಧಗಂಗಾ ಮಠಾಧೀಶರಾದ ಡಾ.ಶ್ರೀ ಶಿವಕುಮಾರ ಸ್ವಾಮೀಜಿಯವರು ಅನಾರೋಗ್ಯದಿಂದ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಆತಂಕದ ವಾತಾವರಣ ನಿರ್ಮಾಣವಾಗಿದೆ. ಶ್ರೀಗಳ ಆರೋಗ್ಯ ಹೇಗಿದೆ ಎಂದು ವಿಚಾರಿಸಲು ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧೆಡೆಗಳಿಂದ ಭಕ್ತ ಸಾಗರವೇ ಮಠದತ್ತ ಹರಿದುಬರುತ್ತಿದೆ. ಶ್ರೀಗಳು ಶೀಘ್ರ ಗುಣಮುಖರಾಗುವಂತೆ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ ನೆರವೇರಿಸಲಾಗುತ್ತಿದೆ. ಎಲ್ಲೆಡೆ ಭಕ್ತರು ಶ್ರೀಗಳ ಆರೋಗ್ಯಕ್ಕಾಗಿ ಮೊರೆಯಿಡುತ್ತಿದ್ದಾರೆ.

ರಾಜಕೀಯ ಪಕ್ಷಗಳ ನಾನಾ ಮುಖಂಡರು, ಮಾಜಿ ಸಚಿವರು, ಶಾಸಕರು, ಸಂಸದರು, ನಿಗಮ-ಮಂಡಳಿಗಳ ಅಧ್ಯಕ್ಷರು ಸೇರಿದಂತೆ ಹಲವಾರು ಗಣ್ಯರು ಮಠದತ್ತ ದಾವಿಸುತ್ತಿದ್ದು, ಸ್ವಾಮೀಜಿಯವರ ಬಗೆಗಿನ ಕಳಕಳಿಯಿಂದ ಅವರ ಆರೋಗ್ಯದ ಬಗ್ಗೆ ವಿಚಾರಿಸುತ್ತಿದ್ದಾರೆ. ಮಠದ ಆವರಣ ಸೇರಿದಂತೆ ಎಲ್ಲೆಡೆ ಜನರೇ ಜಮಾಯಿಸಿದ್ದು, ಸ್ವಾಮೀಜಿಗಳ ಆರೋಗ್ಯದ ಬಗ್ಗೆ ವಿಚಾರಿಸಲು ಜನರು ಬಂದು ಸೇರುತ್ತಲೇ ಇದ್ದಾರೆ.  ಇನ್ನು ಮಠದಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳು ಗುರುಗಳನ್ನು ನೋಡದೆ ಕಂಗಾಲಾಗಿದ್ದಾರೆ. ಇವರೆಲ್ಲರೂ ಶ್ರೀಗಳು ಶೀಘ್ರ ಗುಣಮುಖರಾಗಿ ಮಠಕ್ಕೆ ಹಿಂದಿರುಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸಿಕೊಳ್ಳುತ್ತಿದ್ದಾರೆ.

ಶ್ರೀಗಳ ಅನಾರೋಗ್ಯದ ಸುದ್ದಿ ಕೇಳಿ ತೀವ್ರ ಆಘಾತ ಉಂಟಾಯಿತು. ಅವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.  ಉತ್ತರ ಕನ್ನಡ ಜಿಲ್ಲಾ ಪ್ರವಾಸದಲ್ಲಿರುವ ಕಾರಣ ಆಸ್ಪತ್ರೆಗೆ ಭೇಟಿ ನೀಡಿ ಶ್ರೀಗಳ ಆರೋಗ್ಯ ವಿಚಾರಿಸಲು ಸಾಧ್ಯವಾಗಿಲ್ಲ. ದೂರವಾಣಿ ಮುಖಾಂತರವೇ ಮಾಹಿತಿ ಪಡೆದಿದ್ದೇನೆ. ಶ್ರೀಗಳು ಶೀಘ್ರ ಗುಣಮುಖರಾಗಿ ಮಠಕ್ಕೆ ಮರಳುವಂತಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin