ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಕಿಮ್ಸ್ ನಲ್ಲಿ ಎಂಬಿಬಿಎಸ್ ಸೀಟ್ 150ರಿಂದ 200ಕ್ಕೆ ಹೆಚ್ಚಳ

ಈ ಸುದ್ದಿಯನ್ನು ಶೇರ್ ಮಾಡಿ

KIMS

ಹುಬ್ಬಳ್ಳಿ,ಮೇ 14– ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಎಂಬಿಬಿಎಸ್ ಸೀಟ್‍ಗಳನ್ನು 150ರಿಂದ 200ಕ್ಕೆ ಹೆಚ್ಚಿಸಲಾಗಿದೆ ಎಂದು ಕಿಮ್ಸ್ ಆಸ್ಪತ್ರೆಯ ನಿರ್ದೇಶಕ ದತ್ತಾತ್ರೇಯ ಬಂಟ್ ಹೇಳಿದರು. ಸುದ್ದಿಗರರೊಂದಿಗೆ ಮಾತನಾಡಿದ ಅವರು, ಎಂಸಿಐ ಸೀಟುಗಳನ್ನು ಸಹಾ 150ರಿಂದ 200ಕ್ಕೆ ಹೆಚ್ಚಳ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.   50 ಹೆಚ್ಚುವರಿ ಎಂಬಿಬಿಎಸ್ ಸೀಟ್‍ಗಳನ್ನು ಹೆಚ್ಚಿಸುತ್ತಿರುವುದಕ್ಕೆ ಮನವಿ ಮಾಡಲಾಗಿತ್ತು. ಹೆಚ್ಚಳದಿಂದಾಗಿ ಉತ್ತರ ಕರ್ನಾಟಕದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವರದಾನವಾಗಿದೆ ಎಂದರು.ಬೆಂಗಳೂರು ಮೆಡಿಕಲ್ ಕಾಲೇಜು 250 ಸೀಟ್‍ಗಳನ್ನು ಬಿಟ್ಟಿದೆ. ಕಿಮ್ಸ್‍ನಲ್ಲಿಯೇ ಹೆಚ್ಚು ಸೀಟ್‍ಗಳು ಲಭ್ಯವಾಗಿದ್ದು ಪ್ರವೇಶ ಪಡೆಯಲು ಅನುಕೂಲವಾಗಲಿದೆ. ಪ್ರತಿದಿನ ಎರಡು ಸಾವಿರ ರೋಗಿಗಳು ಬರುತ್ತಾರೆ. ನಿತ್ಯ 900 ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ, ಎಂಸಿಐ ಎಲ್ಲಾ ಅರ್ಹತೆಗಳನ್ನು ನೋಡಿ ಹೆಚ್ಚುವರಿ ಸೀಟುಗಳನ್ನು ನೀಡಿದೆ ಎಂದು ತಿಳಿಸಿದರು.   ಆಸ್ಪತ್ರೆಯಲ್ಲಿ ಸಿಬ್ಬಂದಿ, ಯಂತ್ರೋಪಕರಣ ಸೇರಿದಂತೆ ಎಲ್ಲಾ ಮೂಲ ಸೌಕರ್ಯಗಳನ್ನು ಹೆಚ್ಚಿಸಲಾಗಿದೆ ಎಂದ ಅವರು, ಸೀಟುಗಳ ಹೆಚ್ಚಳದಿಂದ ಗುಣಮಟ್ಟದ ಶಿಕ್ಷಣಕ್ಕೆ ಧಕ್ಕೆಯಾಗುವುದಿಲ್ಲ ಎಂದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin