ಕೊನೆಗೂ ಗೆದ್ದರು ಆರ್ಸಿಬಿ ಹುಡುಗರು

ಈ ಸುದ್ದಿಯನ್ನು ಶೇರ್ ಮಾಡಿ

RCB-Players

ನವದೆಹಲಿ. ಮೇ. 15 : ಐ.ಪಿ.ಎಲ್. 10 ನೇ ಆವೃತ್ತಿಯಲ್ಲಿ ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ಆರ್.ಸಿ.ಬಿ. ಗೆಲುವು ಕಂಡಿದೆ. ಇಲ್ಲಿನ ಫಿರೋಜ್ ಶಾ ಕೋಟ್ಲಾ ಮೈದಾನದಲ್ಲಿ ನಡೆದ ಐ.ಪಿ.ಎಲ್. ಪಂದ್ಯದಲ್ಲಿ ವಿರಾಟ್ ಕೊಹ್ಲಿ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಡೆಲ್ಲಿ ಡೇರ್ ಡೆವಿಲ್ಸ್ ವಿರುದ್ಧ 10 ರನ್ ಗಳ ಅಂತರದಿಂದ ಜಯಗಳಿಸಿದೆ.  ಉಭಯ ತಂಡಗಳಿಗೂ ಅಷ್ಟೇನೂ ಮಹತ್ವವಲ್ಲದ ಈ ಪಂದ್ಯದಲ್ಲಿ ಆರ್’ಸಿಬಿ ಮತ್ತೆ ಬ್ಯಾಟಿಂಗ್ ವೈಫಲ್ಯ ಅನುಭವಿಸಿತು. ಟೂರ್ನಿಯುದ್ದಕ್ಕೂ ಗಮನಾರ್ಹ ಪ್ರದರ್ಶನ ತೋರಲು ವಿಫಲವಾಗಿದ್ದ ಕ್ರಿಸ್ ಗೇಲ್ ತಂಡಕ್ಕೆ ನೆರವಾದರು.

ಸ್ಪೋಟಕ ಆಟವಾಡಿದ ಗೇಲ್ ತಲಾ ಮೂರು ಸಿಕ್ಸರ್ ಹಾಗೂ ಬೌಂಡರಿಯೊಂದಿಗೆ 48ರನ್ ಬಾರಿಸಿದರು. ಇನ್ನು ನಾಯಕನ ಆಟವಾಡಿದ ವಿರಾಟ್ ಕೊಹ್ಲಿ 58ರನ್ ಸಿಡಿಸಿದರು. ಕೊಹ್ಲಿ ಇನಿಂಗ್ಸ್’ನಲ್ಲೂ ಮೂರು ಬೌಂಡರಿ ಹಾಗೂ ಮೂರು ಭರ್ಜರಿ ಸಿಕ್ಸರ್ ಸೇರಿದ್ದು ವಿಶೇಷ. ಆದರೆ ಮಧ್ಯಮ ಕ್ರಮಾಂಕದಲ್ಲಿ ಆರ್’ಸಿಬಿ ಬ್ಯಾಟ್ಸ್’ಮನ್’ಗಳು ಕೈಕೊಟ್ಟಿದ್ದರಿಂದ ತಂಡ 161ರನ್ ಬಾರಿಸಲಷ್ಟೇ ಶಕ್ತವಾಯಿತು.

162 ರನ್ ಗೆಲುವಿನ ಗುರಿ ಪಡೆದ ಡೆಲ್ಲಿ ಡೇರ್ ಡೆವಿಲ್ಸ್ 20 ಓವರ್ ಗಳಲ್ಲಿ ಎಲ್ಲಾ ವಿಕೆಟ್ ಕಳೆದುಕೊಂಡು 151 ರನ್ ಗಳಿಸಿ ಸೋಲು ಕಂಡಿದೆ.
ಕರುಣ್ ನಾಯರ್ 26, ಶ್ರೇಯಸ್ ಅಯ್ಯರ್ 32, ರಿಶಬ್ ಪಂತ್ 45 ರನ್ ಗಳಿಸಿದರು. ಆರ್.ಸಿ.ಬಿ ಪರವಾಗಿ ಹರ್ಷಲ್ ಪಟೇಲ್ 3, ಟ್ರಾವಿಸ್ ಹೆಡ್ 2 ಪವನ್ ನೇಗಿ 3 ವಿಕೆಟ್ ಪಡೆದು ಗಮನ ಸೆಳೆದರು.

ಐಪಿಎಲ್ ಪ್ಲೇ-ಆಫ್ ಗೆ ಲಗ್ಗೆ ಇಟ್ಟ ನಾಲ್ಕು ತಂಡಗಳು : 

2017ರ ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 10ನೇ ಆವೃತ್ತಿಯ ಪ್ಲೇ-ಆಫ್ಗೆ ಬಲಿಷ್ಠ ನಾಲ್ಕು ತಂಡಗಳು ಲಗ್ಗೆ ಇಟ್ಟಿವೆ.   14 ಪಂದ್ಯಗಳಲ್ಲಿ 10 ಪಂದ್ಯಗಳನ್ನು ಗೆಲ್ಲುವ ಮೂಲಕ ಮುಂಬೈ ಇಂಡಿಯನ್ಸ್ ತಂಡ 20 ಅಂಗಳೊಂದಿಗೆ ಅಗ್ರಸ್ಥಾನದಲ್ಲಿದೆ. ಇನ್ನು 9 ಪಂದ್ಯಗಳನ್ನು ಗೆದ್ದಿರುವ ರೈಸಿಂಗ್ ಪುಣೆ ಸೂಪರ್ ಜೈಂಟ್ಸ್ ತಂಡ ಎರಡನೇ ಸ್ಥಾನದಲ್ಲಿದ್ದು ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಮುಂಬೈ ಮತ್ತು ಪುಣೆ ಸೆಣೆಸಲಿದ್ದು ಮುಂಬೈನ ವಾಂಖೆಡೆ ಮೈದಾನದಲ್ಲಿ ಮುಂದಿನ ಮಂಗಳವಾರ ಪಂದ್ಯ ನಡೆಯಲಿದೆ.

ಇನ್ನು ಸನ್ ರೈಸರ್ಸ್ ಹೈದರಾಬಾದ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಟೂರ್ನಿಯಲ್ಲಿ 8 ಪಂದ್ಯಗಳನ್ನು ಗೆಲ್ಲುವ ಮೂಲಕ ಮೂರನೇ ಮತ್ತು ನಾಲ್ಕನೇ ಸ್ಥಾನದಲ್ಲಿವೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಎಲಿಮಿನೇಟರ್ ಪಂದ್ಯ ನಡೆಯಲಿದ್ದು ಉಭಯ ತಂಡಗಳು ಸೆಣೆಸಲಿವೆ.  ಹೈದರಾಬಾದ್ ಮತ್ತು ಕೋಲ್ಕತ್ತಾ ನಡುವಿನ ಪಂದ್ಯದಲ್ಲಿ ಗೆದ್ದವರು ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಸೋತ ತಂಡದ ಜತೆ ಸೆಣೆಸಲಿದೆ. ಈ ಪಂದ್ಯದಲ್ಲಿ ಸೋತವರು ಎಲಿಮಿನೇಟ್ ಆಗುತ್ತದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin