ಚಲಿಸುತ್ತಿದ್ದ ಕಾರಿನಲ್ಲೇ ಯುವತಿ ಮೇಲೆ ಗ್ಯಾಂಗ್‍ರೇಪ್, ಮಾರಣಾಂತಿಕ ಹಲ್ಲೆ

ಈ ಸುದ್ದಿಯನ್ನು ಶೇರ್ ಮಾಡಿ

Gang-Rape

ಗುರುಗ್ರಾಮ್, ಮೇ 15- ಹರ್ಯಾಣದ ರೋಹಟಕ್ ಜಿಲ್ಲೆಯ ಸೋನಾಪೇಟ್‍ನಲ್ಲಿ ದಲಿತ ಯುವತಿ ಮೇಲೆ ಏಳು ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ನಡೆಸಿ ಗುಪ್ತಾಂಗಕ್ಕೆ ಹರಿತವಾದ ಆಯುಧದಿಂದ ಚುಚ್ಚಿ ತಲೆಯನ್ನು ಇಬ್ಭಾಗವಾಗಿ ಸೀಳಿ ಕಗ್ಗೊಲೆ ಮಾಡಿದ ನಿರ್ಭಯಾ-2 ಪ್ರಕರಣದಿಂದ ಜನ ಆಕ್ರೋಶಗೊಂಡಿರುವಾಗಲೇ ಅದೇ ರೀತಿಯ ಗ್ಯಾಂಗ್ ರೇಪ್ ಪ್ರಕರಣ ದೆಹಲಿಯಲ್ಲಿ ಮರುಕಳಿಸಿದೆ.   ಚಲಿಸುತ್ತಿದ್ದ ಕಾರಿನಲ್ಲಿ ಯುವತಿಯೊಬ್ಬಳ ಮೇಲೆ ಗುಂಪು ಬಲತ್ಕಾರ ನಡೆಸಿದ ಮೂವರು ಕಾಮುಕರು ಅಕೆಯ ಮೇಲೆ ಮಾರಕ ಹಲ್ಲೆ ನಡೆಸಿ ರಸ್ತೆಗೆ ಎಸೆದು ಪರಾರಿಯಾಗಿರುವ ಪೈಶಾಚಿಕ ಕೃತ್ಯ ದೆಹಲಿಯ ಗುರುಗ್ರಾಮ್‍ನಲ್ಲಿ ನಡೆದಿದೆ.



ಈಶಾನ್ಯ ರಾಜ್ಯ ಸಿಕ್ಕಿಂ ಮೂಲದ 22 ವರ್ಷದ ಯುವತಿ ದೆಹಲಿಯಲ್ಲಿರುವ ತನ್ನ ಮನೆಗೆ ಹಿಂದಿರುಗುತ್ತಿದ್ದಾಗ ಮೂವರು ದುಷ್ಕರ್ಮಿಗಳು ಆಕೆಯನ್ನು ಕಾರಿನಲ್ಲಿ ಅಪಹರಿಸಿ ಸಾಮೂಹಿಕ ಅತ್ಯಾಚಾರ ನಡೆಸಿ ರಸ್ತೆಗೆ ಎಸೆದು ಪರಾರಿಯಾಗಿದ್ದಾರೆ. ತೀವ್ರ ಗಾಯಗೊಂಡ ಯುವತಿ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸಿಸಿಟಿವಿ ಕ್ಯಾಮೆರಾದ ದೃಶ್ಯವನ್ನು ಪರಿಶೀಲಿಸಲಾಗಿದ್ದು, ದುಷ್ಕರ್ಮಿಗಳ ಬಂಧನಕ್ಕೆ ವ್ಯಾಪಕ ಬಲೆ ಬೀಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin