ಬಿಹಾರದ ನವಾಡ ಜಿಲ್ಲೆಯಲ್ಲಿ ಬಸ್ ಕಂದಕಕ್ಕೆ ಉರುಳಿ ಐವರ ದುರ್ಮರಣ

ಈ ಸುದ್ದಿಯನ್ನು ಶೇರ್ ಮಾಡಿ

Bus-Accident

ನವಾಡ,ಮೇ 15- ಚಾಲಕನ ನಿಯಂತ್ರಣ ತಪ್ಪಿ ಬಸ್ ಕಂದಕಕ್ಕೆ ಉರುಳಿದ ಪರಿಣಾಮ ಐವರು ಪ್ರಯಾಣಿಕರು ಸಾವನ್ನಪ್ಪಿದ್ದು , 50 ಮಂದಿ ಗಾಯಗೊಂಡಿರುವ ಘಟನೆ ಬಿಹಾರದ ನವಾಡ ಜಿಲ್ಲೆಯ ಅಂದರ್ಬರಿ ಸಮೀಪ ನಡೆದಿದೆ. ಇಟ್ಟಿಗೆ ಕಾರ್ಖಾನೆಯ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಬಸ್ ತಡರಾತ್ರಿ2 ಗಂಟೆ ಸುಮಾರಿನಲ್ಲಿ ಅಂದರ್ಬರಿ ಗ್ರಾಮದ ಸಮೀಪ ರಾಷ್ಟ್ರೀಯ ಹೆದ್ದಾರಿ 31ರ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಕಂದಕಕ್ಕೆ ಉರುಳಿದೆ.   ಇದರ ಪರಿಣಾಮ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದು ,12 ಮಂದಿ ಸ್ಥಿತಿ ಚಿಂತಾಜನಕವಾಗಿದೆ. 38 ಮಂದಿ ಸಣ್ಣಪುಟ್ಟಗಳಾಗಿ ಹೊರರೋಗಿಗಳಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ರಾಜಹುಲಿ ಠಾಣೆಯ ಪೊಲೀಸ್ ಅಧಿಕಾರಿ ಅವದೇಶ್‍ಕುಮಾರ್ ತಿಳಿಸಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin