ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ನಿಲ್ಲುವುದಿಲ್ಲ : ಮತ್ತೊಮ್ಮೆ ಗರ್ಜಿಸಿದ ಈಶ್ವರಪ್ಪ

ಈ ಸುದ್ದಿಯನ್ನು ಶೇರ್ ಮಾಡಿ

Eshwarapa-01

ಬಾಗಲಕೋಟೆ, ಮೇ 15– ಕೇಂದ್ರ ವರಿಷ್ಠರ ಎಚ್ಚರಿಕೆ ಬಳಿಕ ಸ್ವಲ್ಪ ಮೆತ್ತಗಾಗಿದ್ದ ವಿಧಾನಪರಿಷತ್ ನಾಯಕ ಕೆ.ಎಸ್.ಈಶ್ವರಪ್ಪ ಇಂದು ಮತ್ತೆ ಗುಡುಗಿದ್ದಾರೆ.ಯಾವುದೇ ಕಾರಣಕ್ಕೂ ರಾಯಣ್ಣ ಬ್ರಿಗೇಡ್ ನಿಲ್ಲುವುದಿಲ್ಲ. ರಾಯಣ್ಣ ಬ್ರಿಗೇಡ್ ಬಗ್ಗೆ ಯಡಿಯೂರಪ್ಪ ಅವರಿಗೆ ಗೊಂದಲವಿದೆ ಎಂದು ಹೇಳಿದ್ದಾರೆ. ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿ ಸಂಘರ್ಷವಿಲ್ಲ. ಯಡಿಯೂರಪ್ಪನವರೇ ನಮ್ಮ ನಾಯಕರು ಅದರಲ್ಲಿ ಎರಡು ಮಾತಿಲ್ಲ. ಆದರೆ ಅವರಿಗೆ ಇನ್ನು ರಾಯಣ್ಣ ಬ್ರಿಗೇಡ್ ಬಗ್ಗೆ ಗೊಂದಲವಿದೆ. ಯಾವುದೇ ಕಾರಣಕ್ಕೂ ರಾಯಣ್ಣ ಬ್ರಿಗೇಡ್ ನಿಲ್ಲುವುದಿಲ್ಲ ಎಂದು ಈಶ್ವರಪ್ಪ ಪುನರುಚ್ಚರಿಸಿದ್ದಾರೆ.ಯಡಿಯೂರಪ್ಪನವರೇ ನಮ್ಮ ಲೀಡರ್. ಸಾಮೂಹಿಕ ನಾಯಕತ್ವದಲ್ಲಿ 2018ರ ವಿಧಾನಸಭೆ ಚುನಾವಣೆ ಎದುರಿಸಿ 150ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಿಸುವುದು ನಮ್ಮ ಗುರಿ. ರಾಜ್ಯದ ಮುಂದಿನ ಮುಖ್ಯಮಂತ್ರಿ ಯಡಿಯೂರಪ್ಪನವರೇ ಎಂದು ಹೇಳಿದರು.  ಕಾಂಗ್ರೆಸ್ ಪಕ್ಷದಲ್ಲಿ ಸಂಘರ್ಷವಿದೆ. ಇಷ್ಟು ದಿನ ಸಿದ್ದರಾಮಯ್ಯ ಮುಂದಿನ ಸಿಎಂ ನಾನೇ ಎಂದು ಹೇಳುತ್ತಿದ್ದರು. ಆದರೆ ಈಗ ಹೈಕಮಾಂಡ್ ತೀರ್ಮಾನಿಸುತ್ತೆ ಎನ್ನುತ್ತಿದ್ದಾರೆ. ನನ್ನ ನಾಯಕತ್ವದಲ್ಲೇ ಚುನಾವಣೆ ಎದುರಿಸುತ್ತೇವೆ ಎನ್ನುತ್ತಾರೆ. ಅತ್ತ ಮಲ್ಲಿಕಾರ್ಜುನ ಖರ್ಗೆ ಸಾಮೂಹಿಕ ನಾಯಕತ್ವ ಎಂದು ಹೇಳುತ್ತಾರೆ ಸಂಘರ್ಷ ಅಲ್ಲಿದೆ ಎಂದು ತಿಳಿಸಿದರು.

ಸಿಎಂ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಚುನಾವಣೆ ಎದುರಿಸಿದರೆ ಬಿಜೆಪಿಗೆ ಲಾಭವಾಗಲಿದೆ. ಸಿದ್ದರಾಮಯ್ಯನವರು ಹಿಂದುಳಿದವರಿಗೆ ದಲಿತರಿಗೆ ಅನ್ಯಾಯ ಮಾಡಿದ್ದಾರೆ. ಅವರೆಲ್ಲರೂ ಸಿದ್ದರಾಮಯ್ಯನವರ ವಿರುದ್ಧ ತಿರುಗಿ ಬಿದ್ದಿದ್ದಾರೆ. ಚುನಾವಣೆ ನೇತೃತ್ವವನ್ನು ಸಿದ್ದರಾಮಯ್ಯನವರಿಗೆ ಕೊಟ್ಟರೆ ಬಿಜೆಪಿಗೆ ಲಾಭವಾಗಲಿದೆ ಎಂದು ಈಶು ಹೇಳಿದರು.  ರಾಜ್ಯದಲ್ಲಿ ತೀವ್ರ ಬರಗಾಲದ ಹಿನ್ನೆಲೆಯಲ್ಲಿ ಸಿಎಂ ಎಸಿ ರೂಮಿನಲ್ಲಿ ಕುಳಿತು ವಿಡಿಯೋ ಕಾನ್ಫರೆನ್ಸ್ ಮಾಡುವ ಬದಲು ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಬೇಕು. ಬರದ ನೈಜ ಪರಿಸ್ಥಿತಿ ಅರಿತುಕೊಳ್ಳಬೇಕು. ವಿಡಿಯೋ ಕಾನ್ಫರೆನ್ಸ್ ಕುರಿತು ಕ್ರಮಕೈಗೊಳ್ಳುತ್ತೇನೆ ಎಂದರೆ ಯಾವ ಅಧಿಕಾರಿಗಳು ಮಾತು ಕೇಳುವುದಿಲ್ಲ ಎಂದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin