ಸಿದ್ದಗಂಗಾ ಶ್ರೀಗಳ ಯೋಗಕ್ಷೇಮ ವಿಚಾರಿಸಲು ಆಗಮಿಸುತ್ತಾರೆ ಪ್ರಧಾನಿ ಮೋದಿ

ಈ ಸುದ್ದಿಯನ್ನು ಶೇರ್ ಮಾಡಿ

Modi--01

ತುಮಕೂರು,ಮೇ 15- ಶ್ರೀ ಸಿದ್ದಗಂಗಾ ಮಠಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ನೀಡಿ ಸ್ವಾಮೀಜಿಯವರ ಯೋಗಕ್ಷೇಮ ವಿಚಾರಿಸಲಿದ್ದಾರೆ ಎಂದು ಕಿರಿಯ ಶ್ರೀ ಸಿದ್ದಲಿಂಗ ಸ್ವಾಮೀಜಿಗಳು ತಿಳಿಸಿದ್ದಾರೆ. ಸಿದ್ದಗಂಗಾ ಮಠದ ಕಿರಿಯ ಶ್ರೀ ಸಿದ್ದಲಿಂಗ ಸ್ವಾಮೀಜಿಯವರಿಗೆ ಪ್ರಧಾನಮಂತ್ರಿಗಳ ಕಾರ್ಯಾಲಯದಿಂದ ಸಂಜೆ 5.10ರಲ್ಲಿ ಮಠಕ್ಕೆ ದೂರವಾಣಿ ಕರೆ ಬಂದಿದೆ.



ಕರೆ ಸ್ವೀಕರಿಸಿ ಮಾತನಾಡಿರುವ ಶ್ರೀಗಳು, ನಾನು ನರೇಂದ್ರ ಮೋದಿ ನಮಸ್ಕಾರ ಸ್ವಾಮೀಜಿ. ಶ್ರೀ ಅವರ ಆರೋಗ್ಯ ಹೇಗಿದೆ ಎಂದು ಯೋಗಕ್ಷೇಮ ವಿಚಾರಿಸಿಕೊಂಡಿದ್ದಾರೆ. ಶ್ರೀಗಳ ಆರೋಗ್ಯದ ಬಗ್ಗೆ ಸಮಗ್ರವಾಗಿ ವಿಚಾರಿಸಿದ ಮೋದಿ ಅವರು ಶೀಘ್ರದಲ್ಲೇ ಮಠಕ್ಕೆ ಭೇಟಿ ನೀಡುವುದಾಗಿ ತಿಳಿಸಿದ್ದಾರೆ. ಈ ವಿಚಾರದಿಂದಾಗಿ ಸಾವಿರಾರು ವಿದ್ಯಾರ್ಥಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

 

Facebook Comments

Sri Raghav

Admin