ಐಎಎಸ್ ಅಧಿಕಾರಿ ಬಡೇರಿಯಾ ಬಂಧನಕ್ಕೂ-ರಾಜ್ಯಸರ್ಕಾರಕ್ಕೂ ಸಂಬಂಧವಿಲ್ಲ : ಸಿಎಂ ಸ್ಪಷ್ಟನೆ

ಈ ಸುದ್ದಿಯನ್ನು ಶೇರ್ ಮಾಡಿ

 

siddu
ಬೆಂಗಳೂರು, ಮೇ 16-ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಐಎಎಸ್ ಅಧಿಕಾರಿ ಗಂಗಾರಾಮ್ ಬಡೇರಿಯಾ ಅವರ ಬಂಧನಕ್ಕೂ, ರಾಜ್ಯಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.  ಅಕ್ರಮ ಗಣಿಗಾರಿಕೆಯ ಹಿನ್ನೆಲೆಯಲ್ಲಿ ನಿವೃತ್ತ ಲೋಕಾಯುಕ್ತ ಸಂತೋಷ್ ಹೆಗಡೆ ನೀಡಿರುವ ವರದಿ ಆಧರಿಸಿ ಸುಪ್ರೀಂಕೋರ್ಟ್ ವಿಚಾರಣೆ ನಡೆಸುತ್ತಿದೆ. ಸುಪ್ರೀಂಕೋರ್ಟ್ ನಿರ್ದೇಶನದ ಮೇರೆಗೆ ವಿಶೇಷ ತನಿಖಾ ದಳ (ಎಸ್‍ಐಟಿ) ರಚನೆಯಾಗಿ ತನಿಖೆ ನಡೆಯುತ್ತಿದೆ.   ತನಿಖೆಯ ಭಾಗವಾಗಿ ಬಡೇರಿಯಾ ಅವರನ್ನು ಬಂಧಿಸಲಾಗಿದೆ. ಇದರಲ್ಲಿ ರಾಜ್ಯಸರ್ಕಾರದ ಯಾವುದೇ ಹಸ್ತಕ್ಷೇಪವಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.  ಇಂದು ಬೆಳಗ್ಗೆ ರಾಮಯ್ಯ ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆಯುತ್ತಿರು ಪಾರ್ವತಮ್ಮ ರಾಜ್‍ಕುಮಾರ್ ಅವರ ಆರೋಗ್ಯ ವಿಚಾರಿಸಿದ್ದೇನೆ. ಶೀಘ್ರವೇ ಅವರು ಚೇತರಿಸಿಕೊಂಡು ಮನೆಗೆ ಮರಳಲಿ ಎಂದು ಹಾರೈಸುವುದಾಗಿ ತಿಳಿಸಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin