ಕೆಲಸದ ಆಮಿಷ ತೋರಿಸಿ ಅತ್ಯಾಚಾರ ಎಸಗಿದ್ದ ಇಬ್ಬರ ಬಂಧನ

ಈ ಸುದ್ದಿಯನ್ನು ಶೇರ್ ಮಾಡಿ

rape
ಬೆಂಗಳೂರು, ಮೇ 16- ಸ್ಟಾರ್ ಹೊಟೇಲ್‍ನಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಯುವತಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿದ್ದ ಇಬ್ಬರನ್ನು ಬೆಳ್ಳಂದೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.  ಜೋಷಿ (58) ಮತ್ತು ನರೇಂದ್ರ ಬಾಬು (51) ಬಂಧಿತ ಕಾಮುಕರು.  ಮುಂಬೈನ 24 ವರ್ಷದ ಯುವತಿಗೆ ಸ್ಟಾರ್ ಹೊಟೇಲ್‍ನಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಆರೋಪಿಗಳು ಕೃತ್ಯ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.  ಈ ಸಂಬಂಧ ಪೊಲೀಸರಿಗೆ ದೂರು ನೀಡಿರುವ ಯುವತಿ ಸ್ಟಾರ್ ಹೊಟೇಲ್‍ನಲ್ಲಿ ಕೆಲಸ ಕೊಡಿಸುತ್ತೇವೆ ಮಾತನಾಡಬೇಕು ಎಂದು ಹೇಳಿ ಭಾನುವಾರ ಅರಳೂರು ರಸ್ತೆಯಲ್ಲಿನ ಮನೆಗೆ ಕರೆದೊಯ್ದು ಇಬ್ಬರು ಅತ್ಯಾಚಾರ ಎಸಗಿದ್ದಾರೆಂದು ತಿಳಿಸಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಬೆಳ್ಳಂದೂರು ಠಾಣೆ ಪೊಲೀಸರು ಆರೋಪಿಗಳನ್ನು ಬಂಧಿಸಿ ಮುಂದಿನ ಕ್ರಮಕೈಗೊಂಡಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin