ಪ್ರಪಾತಕ್ಕೆ ಬಸ್ ಬಿದ್ದು ಇಬ್ಬರು ಸಾವು, ಹಲವರು ಗಂಭೀರ

ಈ ಸುದ್ದಿಯನ್ನು ಶೇರ್ ಮಾಡಿ

beltangadi
ಬೆಂಗಳೂರು, ಮೇ 16-ಚಾಲಕನ ನಿಯಂತ್ರಣ ತಪ್ಪಿದ ಕೇರಳದ ಖಾಸಗಿ ಬಸ್ಸೊಂದು ಪ್ರಪಾತಕ್ಕೆ ಬಿದ್ದ ಪರಿಣಾಮ ಇಬ್ಬರು ಸಾವನ್ನಪ್ಪಿ ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳ್ತಂಗಡಿಯ ಚಾರ್ಮಾಡಿ ಘಾಟ್‍ನಲ್ಲಿ ಸಂಭವಿಸಿದೆ. ಚಾರ್ಮಾಡಿ ಘಾಟ್‍ನ 3ನೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕೇರಳ ಸಾರಿಗೆ ಬಸ್ ಪ್ರಪಾತಕ್ಕೆ ಉರುಳಿ ಬಿದ್ದಿದೆ.  ಅವಘಡದಲ್ಲಿ ಇಬ್ಬರು ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿದ್ದಾರೆ. ಸ್ಥಳೀಯ ನಿವಾಸಿಗಳು ರಕ್ಷಣಾ ಕಾರ್ಯ ನಡೆಸಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin