ಗೂಡ್ಸ್ ಆಟೋ,ಕಾರು ಮುಖಾಮುಖಿ ಡಿಕ್ಕಿ : ವೃದ್ದ ಸಾವು, 9 ಮಂದಿ ಗಂಭೀರ

ಈ ಸುದ್ದಿಯನ್ನು ಶೇರ್ ಮಾಡಿ

deadly--accident

ದಾವಣಗೆರೆ,ಮೇ 17- ಗೂಡ್ಸ್ ಆಟೋ ಮತ್ತು ಕಾರು ನಡುವೆ ಡಿಕ್ಕಿ ಸಂಭವಿಸಿ ಓರ್ವ ವೃದ್ಧ ಮೃತಪಟ್ಟಿದ್ದು , 9 ಜನ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಲೆಬೆನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಆಟೋದಲಿದ್ದ ಧರ್ಮಪ್ಪ(82) ಮೃತಪಟ್ಟ ವೃದ್ಧ. ಕಾರು ಚಾಲಕ ಕದೀರ್ ಅಹಮ್ಮದ್, ಆತನ ಪತ್ನಿ ಹಾಗೂ ಪುತ್ರನಿಗೆ ಗಂಭೀರ ಗಾಯಗಳಾಗಿದ್ದು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಹೊರರೋಗಿಗಳಾಗಿ ಚಿಕಿತ್ಸೆ ಪಡೆದಿದ್ದಾರೆ ಎಂದು ಹೇಳಲಾಗಿದೆ. ಹರಿಹರದಿಂದ ಮಲೆಬೆನ್ನೂರಿಗೆ 11 ಜನರನ್ನು ತುಂಬಿಕೊಂಡು ತೆರಳುತ್ತಿದ್ದ ಗೂಡ್ಸ್ ಆಟೋ ಭದ್ರಾವತಿಯಿಂದ ಹರಿಹರಕ್ಕೆ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಶಂಕರ್ ಗುಲ್ಹಟ್ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin