ಹಳಿ ತಪ್ಪಿದ ಬೆಂಗಳೂರಿನಿಂದ ಹೊಸಪೇಟೆಗೆ ಹೊರಟಿದ್ದ ಪ್ಯಾಸೆಂಜರ್ ರೈಲು, ತಪ್ಪಿದ ದುರಂತ

ಈ ಸುದ್ದಿಯನ್ನು ಶೇರ್ ಮಾಡಿ

chitradurga

ಚಿತ್ರದುರ್ಗ, ಮೇ 17-ಬೆಂಗಳೂರಿನಿಂದ ಹೊಸಪೇಟೆಗೆ ಹೊರಟಿದ್ದ ಪ್ಯಾಸೆಂಜರ್ ರೈಲು ಚಿತ್ರದುರ್ಗ ನಗರದ ಬಳಿ ಹಳಿ ತಪ್ಪಿದ್ದು, ಚಾಲಕನ ಸಮಯ ಪ್ರಜ್ಞೆಯಿಂದ ಭಾರೀ ದುರಂತ ತಪ್ಪಿದೆ.ರೈಲ್ವೆ ಹಳಿ ಬಿರುಕು ಬಿಟ್ಟಿದ್ದರಿಂದ ರೈಲು ಹಳಿ ತಪ್ಪಿದೆಯಾದರೂ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಚಾಲಕ ಸಕಾಲದಲ್ಲಿ ರೈಲು ನಿಲ್ಲಿಸಿ ಸಮಯ ಪ್ರಜ್ಞೆ ಮೆರೆದಿದ್ದಾರೆ. ನಿನ್ನೆ ರಾತ್ರಿ 10 ಗಂಟೆಗೆ ಬೆಂಗಳೂರಿನ ಹೊಸಪೇಟೆಗೆ ಹೊರಟಿದ್ದ ಪ್ಯಾಸೆಂಜರ್ ರೈಲು ಚಿತ್ರದುರ್ಗದ ರಾಷ್ಟ್ರೀಯ ಹೆದ್ದಾರಿ 13ರಲ್ಲಿನ ರೈಲ್ವೆ ಸೇತುವೆ ಬಳಿ ಹಳಿ ತಪ್ಪಿದೆ.ಒಂದೆರಡು ಬೋಗಿಗಳು ಹಳಿ ಬಿಟ್ಟು ಹೊರಗೆ ಜರುಗಿವೆ. ಮಧ್ಯದಲ್ಲೇ ರೈಲು ನಿಂತಿದ್ದರಿಂದ ಪ್ರಯಾಣಿಕರು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಯಿತು.ರೈಲ್ವೆ ಸಿಬ್ಬಂದಿ ಸ್ಥಳಕ್ಕಾಗಮಿಸಿ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಪ್ರಯತ್ನ ನಡೆಸಿದರು. ಪರ್ಯಾಯ ವ್ಯವಸ್ಥೆ ಕ್ರಮಕ್ಕೆ ಮುಂದಾದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

 

Facebook Comments

Sri Raghav

Admin