ಅಪ್ರಾಪ್ತಳ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನ : ಮಲತಂದೆ ಬಂಧನ

ಈ ಸುದ್ದಿಯನ್ನು ಶೇರ್ ಮಾಡಿ

rape--case
ಬೆಂಗಳೂರು, ಮೇ 19-ಅಪ್ರಾಪ್ತಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಲು ಯತ್ನಿಸಿದ ಮಲತಂದೆ ಪೊಲೀಸರ ಅತಿಥಿಯಾಗಿರುವ ಘಟನೆ ಬೆಳ್ಳಂದೂರು ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಕರಾಟೆ ಮಾಸ್ಟರ್ ರಾಮ್‍ರಾಜ್ ಬಂಧಿತ ಮಲತಂದೆ.ಹದಿನಾಲ್ಕು ವರ್ಷದ ಅಪ್ರಾಪ್ತ ಸಂತ್ರಸ್ತೆ ತಾಯಿ ಗಂಡನನ್ನು ತೊರೆದು ಆರೋಪಿಯನ್ನು ಎರಡನೆ ವಿವಾಹವಾಗಿದ್ದರು.ಸಂತ್ರಸ್ತೆಯ ತಾಯಿ ಗಾರ್ಮೆಂಟ್ಸ್ ಕೆಲಸಕ್ಕೆ ಹೋಗುತ್ತಿದ್ದು, ನಿನ್ನೆ ಕೆಲಸಕ್ಕೆ ತೆರಳಿದ್ದು, ಮಗಳು ಮನೆಯಲ್ಲಿ ಒಬ್ಬಳೇ ಇದ್ದಾಗ ಮಲತಂದೆ ಬಂದಿದ್ದಾನೆ.ಈ ವೇಳೆ ಒಂಟಿಯಾಗಿದ್ದ ಮಲಮಗಳ ಮೇಲೆ ಲೈಂಗಿಕ ದೌಜನ್ಯಕ್ಕೆ ಯತ್ನಿಸಿದ್ದಾನೆ. ಆಗ ಬಾಲಕಿ ಕಿರುಚಿಕೊಂಡಿದ್ದು, ಅಕ್ಕಪಕ್ಕದ ಮನೆಯವರು ಬಂದು ಆಕೆಯನ್ನು ರಕ್ಷಿಸಿದ್ದಾರೆ.ಈ ಸಂಬಂಧ ಸಂತ್ರಸ್ತೆ ತಾಯಿ ಬೆಳ್ಳಂದೂರು ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ಮಲತಂದೆಯನ್ನು ಬಂಧಿಸಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin