ಕಾರು ಅಪಘಾತದಲ್ಲಿ ಲೋಕಾಯುಕ್ತ ಮುಖ್ಯ ಎಂಜಿನಿಯರ್ ಸಾವು  

ಈ ಸುದ್ದಿಯನ್ನು ಶೇರ್ ಮಾಡಿ

MADDHURU
ಮದ್ದೂರು , ಮೇ 19- ಸ್ನೇಹಿತರ ಮದುವೆಗೆ ತೆರಳಿ ವಾಪಸಾಗುವಾಗ ಸಂಭವಿಸಿದ ಕಾರು ಅಪಘಾತದಲ್ಲಿ ಲೋಕಾಯುಕ್ತ ಮುಖ್ಯ ಎಂಜಿನಿಯರ್ ಮೃತಪಟ್ಟಿರುವ ಘಟನೆ ಮದ್ದೂರು ತಾಲೂಕಿನ ನಿಟ್ಟೂರು ಬಳಿ ನಡೆದಿದೆ.ಬೆಂಗಳೂರಿನ ಇಂದಿರಾನಗರ ನಿವಾಸಿ ದೊರೆಸ್ವಾಮಿ (58) ಮೃತ ದುರ್ದೈವಿ.
ಮೈಸೂರಿನಲ್ಲಿ ನಡೆದ ಸ್ನೇಹಿತರೊಬ್ಬರ ವಿವಾಹ ಸಮಾರಂಭವೊಂದರಲ್ಲಿ ಪಾಲ್ಗೊಂಡು ನಿನ್ನೆ ಸಂಜೆ ಇಂಡಿಕಾ ಕಾರಿನಲ್ಲಿ ಬರುವಾಗ ನಿಟ್ಟೂರು ಬಳಿ ಎರಡು ಗೂಡ್ಸ್ ಆಟೋಗಳು ಇವರ ವಾಹನಕ್ಕೆ ಡಿಕ್ಕಿ ಹೊಡೆದಿವೆ.ತೀವ್ರವಾಗಿ ಗಾಯಗೊಂಡ ಇವರನ್ನು ತಕ್ಷಣ ಮದ್ದೂರು ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ನಂತರ ರಾತ್ರಿ ಬೆಂಗಳೂರಿನ ಹೊಸ್ಮಠ್ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.ಕಾರಿನಲ್ಲಿ ಇವರ ಜತೆಯಲ್ಲಿದ್ದ ಆನಂದ್, ಗಣೇಶ್, ಮತ್ತಿಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಮದ್ದೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin