ಮುಂದಿನ ಚುನಾವಣೆಗೆ ಉತ್ತರ ಪ್ರದೇಶ ಮಾದರಿಯಲ್ಲಿ ಟಿಕೆಟ್ ಹಂಚಿಕೆ : ಯಡಿಯೂರಪ್ಪ

ಈ ಸುದ್ದಿಯನ್ನು ಶೇರ್ ಮಾಡಿ

BS-ydiyurappa

ಚಿತ್ರದುರ್ಗ, ಮೇ 19- ಸಂಸದ ಜಿ.ಎಂ.ಸಿದ್ದೇಶ್ವರ ಅವರ ಶಿಕ್ಷಣ ಸಂಸ್ಥೇಗಳ ಮೇಲೆ ಐಟಿ ಅಧಿಕಾರಿಗಳು ನಡೆಸಿದ ದಾಳಿಗೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.  ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದೇಶ್ವರ ಅವರ ಶಿಕ್ಷಣ ಸಂಸ್ಥೆಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ಕಾಗದ ಪತ್ರಗಳ ಪರಿಶೀಲನೆ ನಡೆಸಿದರೆ ಅದು ಅವರ ವ್ಯವಹಾರಕ್ಕೆ ಸಂಬಂಧಿಸಿದ್ದು ಎಂದರು.
ಬರೀ ಕಾಂಗ್ರೆಸ್ ನಾಯಕರ ಮನೆಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸುತ್ತಿದ್ದಾರೆ ಎಂಬ ಟೀಕೆಗೆ ಉತ್ತರಿಸಿದ ಯಡಿಯೂರಪ್ಪ ಬಿಜೆಪಿ ನಾಯಕರ ಮತ್ತು ಶಿಕ್ಷಣ ಸಂಸ್ಥೆಗಳ ಮೇಲೆ ದಾಳಿ ನಡೆಸಿದ್ದನ್ನು ನೋಡಿದರೆ ಕೇಂದ್ರ ಸರ್ಕಾರ ನಿಷ್ಪಕ್ಷಪಾತವಾಗಿದೆ ಎನ್ನುವುದಕ್ಕೆ ಇದು ಸಾಕ್ಷಿ ಎಂದರು.



ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶ ಮಾದರಿಯಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು ಎಂದ ಅವರು, ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರು ಮೂರು ದಿನಗಳ ರಾಜ್ಯಕ್ಕೆ ಭೇಟಿ ನೀಡಲಿರುವ ಸಂದರ್ಭದಲ್ಲಿ ಅವರ ಮುಂದೆ ಎಲ್ಲ ಇರಿಸಲಾಗುವುದು. ಅವರೇ ತೀರ್ಮಾನ ಮಾಡುತ್ತಾರೆ ಎಂದರು.  ಅಭ್ಯರ್ಥಿಗಳ ಆಯ್ಕೆ ಷಾ ಮತ್ತು ತಮ್ಮ ಮನೆಯಲ್ಲಿ ನಡೆಯುವುದಿಲ್ಲ. ಕಾರ್ಯಕರ್ತರ ಒಟ್ಟಾಭಿಪ್ರಾಯದ ಮೇರೆಗೆ ಗೆಲ್ಲುವ ಕುದುರೆಗಳಿಗೆ ನೀಡಲಾಗುವುದು ಎಂದರು.  ಸಂಸದ ಶ್ರೀರಾಮುಲು, ಶೋಭಾ ಕರಂದ್ಲಾಜೆ, ಶಾಸಕ ತಿಪ್ಪಾರೆಡ್ಡಿ ಸೇರಿದಂತೆ ಮತ್ತಿತರರಿದ್ದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin