ಎರಡು ಬೈಕುಗಳ ಮುಖಾಮುಖಿ ಡಿಕ್ಕಿ : ಐದು ಮಂದಿಗೆ ಗಾಯ, ಒಬ್ಬ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

accident
ಕೋಲಾರ, ಮೇ 20- ಎರಡು ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಬ್ಬ ಸಾವನ್ನಪ್ಪಿ ಐದು ಮಂದಿಗೆ ಗಾಯವಾಗಿರುವ ಘಟನೆ ಜಿಲ್ಲೆಯ ಬಂಗಾರಪೇಟೆ ಪಟ್ಟಣದ ಹಳೇ ಪೆಟ್ರೋಲ್ ಬಂಕ್ ಬಳಿ ನಿನ್ನೆ ತಡರಾತ್ರಿ ನಡೆದಿದೆ.ಕೆಜಿಎಫ್‍ನ ವಿಜಯನಗರ ನಿವಾಸಿ ರಾಮ್‍ಬಾಬು(20) ಮೃತಪಟ್ಟ ಸವಾರ.ತ್ರಿಬಲ್‍ರೈಡ್‍ನಲ್ಲಿದ್ದ ಎರಡು ಬೈಕ್‍ಗಳು ಮುಖಾಮುಖಿ ಡಿಕ್ಕಿ ಸಂಭವಿಸಿ ಈ ಘಟನೆ ನಡೆದಿದೆ.ಉಳಿದ ಐದು ಜನರಿಗೆ ತೀವ್ರ ಗಾಯಗಳಾಗಿದ್ದು, ಬಂಗಾರಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಬಂಗಾರಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin