ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ, ಸ್ಥಳದಲ್ಲೇ ಇಬ್ಬರ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

Car-Accident--01

ಮುದ್ದೇಬಿಹಾಳ,ಮೇ 21- ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟು ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲ್ಲೂಕಿನ ತಾಳಿಕೋಟೆ ಸಮೀಪ ಇಂದು ಬೆಳಗ್ಗೆ ಸಂಭವಿಸಿದೆ. ಹೊಸಪೇಟೆ ಮೂಲದ ರೆಹಮಾನ್(25) ಮರ್ಜನ್ ವಾಲಿ(20) ಮೃತಪಟ್ಟವರು.  ಮೃತರು ಮನಗೂಳಿ ದೇವಾಪೂರ ರಾಜ್ಯ ಹೆದ್ದಾರಿರಸ್ತೆ ಕಾಮಗಾರಿ ನಿರ್ವಹಿಸುತ್ತಿರುವ ಸದ್ಭವ ಇಂಜಿನಿಯರಿಂಗ್ ಕಂಪನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು ಎಂದು ತಿಳಿದುಬಂದಿದೆ.



ಕೊಣ್ಣೂರಿನಿಂದ ಮಾಳೂರಿಗೆ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಗಂಭೀರವಾಗಿ ಗಾಯಗೊಂಡ ಇನ್ನೊಬ್ಬನ ಹೆಸರು ತಿಳಿದುಬಂದಿಲ್ಲ. ಚಿಕಿತ್ಸೆಗಾಗಿ ಆಸ್ಪತ್ರೆಗೆ ಸೇರಿಸಲಾಗಿದ್ದು ಪರಿಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ತಾಳಿಕೋಟಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin