ದ್ವಿಚಕ್ರ ವಾಹನದಲ್ಲಿ ಸಾಗಿಸುತ್ತಿದ್ದ 1.50 ಲಕ್ಷ ಮೌಲ್ಯದ ಗಾಂಜಾ ವಶ

ಈ ಸುದ್ದಿಯನ್ನು ಶೇರ್ ಮಾಡಿ

Ganja-----0

ವಿಜಯಪುರ,ಮೇ 21- ದ್ವಿಚಕ್ರ ವಾಹನದಲ್ಲಿ ಸಾಗಿಸುತ್ತಿದ್ದ ಸುಮಾರು 1,50,000 ರೂ. ಮೌಲ್ಯದ ಗಾಂಜಾವನ್ನು ಜಪ್ತಿ ಮಾಡಿದ ಪೊಲೀಸರು ಒಬ್ಬನನ್ನು ಬಂಧಿಸಿದ್ದಾರೆ. ಜಮಖಂಡಿ ತಾಲ್ಲೂಕಿನ ಗದ್ಯಳ ಗ್ರಾಮದ ಮಲ್ಲಪ್ಪ ಸಾಠೆ(48) ಬಂಧಿತ ವ್ಯಕ್ತಿ.   ಅಕ್ರಮವಾಗಿ ದ್ವಿಚಕ್ರ ವಾಹನದಲ್ಲಿ ಗಾಂಜಾ ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿ ಗಾಂಜಾ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಅಬಕಾರಿ ಉಪ ಅಧೀಕ್ಷಕ ಜಗದೀಶ ಇನಾಮಧಾರ, ಅಬಕಾರಿ ನಿರೀಕ್ಷಕರಾದ ಎ.ಎ.ಮುಜಾವರ್, ಎಂ.ಡಿ.ಕಬಾಡಿ, ಸಿಬ್ಬಂದಿಗಳಾದ ಎನ್.ಎ.ಬಾರಾಗಣಿ, ಅಜೀಮ ಮಾನಗೂಳಿ ದಾಳಿ ನಡೆಸಿದ್ದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin